Categories: Blog

ರಿಪ್ಪನ್ ಪೇಟೆ : ಕೇಂದ್ರ ಗೃಹ ಸಚಿವ ಅಮಿತ್ ಷಾ ರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ರಾಷ್ಟ್ರಪತಿಗಳಿಗೆ ಮನವಿ:

ರಿಪ್ಪನ್ ಪೇಟೆ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆಯಾಗುತ್ತಾರೆ ಎಂಬ ಬಾಲಿಷ ಹೇಳಿಕೆ ನೀಡಿರುವ ದೇಶದ ಗೃಹ ಮಂತ್ರಿ ಅಮಿತ್ ಷಾ ರವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ವತಿಯಿಂದ ರಾಷ್ಟ್ರಪತಿಗಳಿಗೆ ಉಪತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.

ಇತ್ತೀಚೆಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಷಾ ಟಿವಿ ಸಂದರ್ಶನವೊಂದರ ವೇಳೆ ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ. ಅಂತಹ ವ್ಯಕ್ತಿಯು ಉತ್ತಮ ಪ್ರಜೆ ಹೇಗೆ ಆಗುತ್ತಾನೆ ಎಂದಿದ್ದರು.
ಈ  ಹೇಳಿಕೆಯನ್ನು ಖಂಡಿಸಿರುವ ಜೆಡಿಎಸ್ ರಾಜ್ಯ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ರವರು ಮಾತನಾಡಿ ಇಂತಹ ಹೇಳಿಕೆ ದೇಶದಲ್ಲಿ ಇರುವ ಅನಕ್ಷರಸ್ತರಿಗೆ ಮಾಡಿದ ಅಗೌರವವಾಗಿದೆ.ಇದೊಂದು ಸಂಪೂರ್ಣವಾದ ಬೇಜವಾಬ್ದಾರಿ ಹೇಳಿಕೆ,ಒಬ್ಬ ದೇಶದ ಗೃಹ ಮಂತ್ರಿಯಾಗಿ ಇಂತಹ ಕೀಳುಮಟ್ಟದ ಹೇಳಿಕೆ ನೀಡಬಾರದು.ಸುಮಾರು 40 ವರ್ಷಗಳ ಹಿಂದೆ ಜನಜೀವನ ಹೇಗಿತ್ತು ಎನ್ನುವುದನ್ನು ಅವರು ತಿಳಿದುಕೊಳ್ಳುವುದು ಸೂಕ್ತ ಹಾಗೇಯೆ ದೇಶ ಕಂಡ ಅತ್ಯುತ್ತಮ ಮುಖ್ಯಮಂತ್ರಿ ದೇವರಾಜ್ ಅರಸ್ ರವರು ರೈತರು ಹಾಗೂ ಅನಕ್ಷರಸ್ಥರು ಈ ದೇಶದ ಜೀವನಾಡಿ ಎಂದಿದ್ದರು.ದೇಶದ ಶೇಕಡಾ 60% ರಷ್ಟು ಅವಿದ್ಯಾವಂತರಿಗೆ ಹೇಳಿದ ಮಾತು ಅತ್ಯಂತ ಕೀಳುಮಟ್ಟದ ಹೇಳಿಕೆಯಾಗಿದೆ ಆದರಿಂದ ಈ ಕೂಡಲೇ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ರವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಹಾಗೂ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಅಮಿತ್ ಷಾ ರವರನ್ನು ವಜಾ ಮಾಡಬೇಕೆಂದು ಮನವಿ ಮಾಡಿದರು.

ನಂತರ ಮಾತನಾಡಿದ ಜೆಡಿಎಸ್ ಮುಖಂಡರಾದ ಆರ್ ಎನ್ ಮಂಜುನಾಥ್  ಹಿಂದಿನ ಕಾಲದಲ್ಲಿ ಜನ ಜೀವನ ನಡೆಸುವುದೇ ಕಷ್ಟಕರವಾಗಿತ್ತು ಅಂತಹ ಸಂಧರ್ಭದಲ್ಲಿ ವಿಧ್ಯಾಭ್ಯಾಸ ಕೈಗೆಟುವ ಹಾಗೆ ಇರಲಿಲ್ಲ. ಚರಿತ್ರೆಯನ್ನು ತಿಳಿದು ಮಾತನಾಡಬೇಕಾಗಿರುವ ದೇಶದ ಗೃಹ ಸಚಿವರು ಸಾರಾಸಗಟಾಗಿ ದೇಶದ ಅವಿದ್ಯಾವಂತರನ್ನು ದೇಶಕ್ಕೆ ಹೊರೆ ಎಂದು ಹೇಳಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.ದೇಶದ ಪ್ರಸ್ತುತ ಸಮಸ್ಯೆಗಳಾದ ಬೆಲೆ ಏರಿಕೆ ಹಾಗೂ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸುವುದನ್ನು ಬಿಟ್ಟು ಈ ತರಹ ಬೇಜವಬ್ದಾರಿ ಹೇಳಿಕೆ ನೀಡುತ್ತಲೇ ಕಾಲಾಹರಣ ಮಾಡುತ್ತಿದ್ದಾರೆ ಎಂದು ಈ ಸಂಧರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಜೆಡಿಎಸ್ ರೈತ ಮೋರ್ಚಾ ಮುಖಂಡರಾದ ಮುಡುಬಾ ಧರ್ಮಪ್ಪ,ಎನ್ ವರ್ತೇಶ್,ಮಂಜೋಜಿರಾವ್,ಈಶ್ವರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

3 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

3 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

4 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago