ರಿಪ್ಪನ್ ಪೇಟೆ : ದಿನಾಂಕ 21ರ ಗುರುವಾರ,ಸಮಯ ಸಂಜೆ 5:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಬಿ,ಜಿ, ನಾಗರಾಜ್, ತಾಲ್ಲೂಕು ವೀಕ್ಷಕರಾದ ಮಲ್ಲಿಕಾರ್ಜುನ್ ಹಕ್ರೆ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡ್ ರತ್ನಕರ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಬಿ ಪಿ ರಾಮಚಂದ್ರ,ಜಿಲ್ಲಾ ಪಂಚಾಯತ್ ಮಾಜಿಸದಸ್ಯಯಾದ ಶ್ವೇತಾ ಬಂಡಿ,ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹಾಲಕ್ಷ್ಮೀ ಅಣ್ಣಪ್ಪ,ಡಿಸಿಸಿ ಬ್ಯಾಂಕ್ ನಿರ್ದೇಶಕರಾದ,M M ಪರಮೇಶ್, ಈಶ್ವರಪ್ಪ ಗೌಡ್ರು ಎಂ ಬಿ ಲಕ್ಷ್ಮಣ್ ಗೌಡ್ರು ಚಂದ್ರೇಶ್ ಅಮೀರ್ ಹಂಝ,ಮಧುಸೂದನ್ಭತ್ತದ ರಾಜಣ್ಣ, ಗಣ ಪತಿ ಪ್ರಕಾಶ್ ಪಾಳೆಕಾರ್ ಜಿಲ್ಲಾಕಾರ್ಯದರ್ಶಿಯಾದ ಉಲ್ಲಾಸ,ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ, ಮಹೇಂದ್ರ ಬುಕ್ಕಿವರೆ,ಧನಲಕ್ಷ್ಮೀ,ಸಾರಬಿ,ವೇದವತಿಪರಮೇಶ್,ನಿರೂಪಮರಾಕೇಶ್,ಮತ್ತು ರಮೇಶ್ ಫ಼್ಯಾನ್ಸಿ ಹಾಗೂ ಇನ್ನಿತರ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಮಹಿಳಾ ಮುಖಂಡರು, ಗ್ರಾಮ ಪಂಚಾಯತ್ ಹಾಲಿ, ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಕಿರಿಯ ಕಾರ್ಯಕರ್ತರು,ಅಭಿಮಾನಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಗೆ ಹಾಜರಾಗುವಂತೆ ತಿಳಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್