w
Headlines
Home » ರಿಪ್ಪನ್ ಪೇಟೆ : ಜೇನಿ ಗ್ರಾಪಂ ಮಾಜಿ ಸದಸ್ಯರಾದ ಹೊ ಮ ಲೋಕಪ್ಪ ಗೌಡ ನಿಧನ

ರಿಪ್ಪನ್ ಪೇಟೆ : ಜೇನಿ ಗ್ರಾಪಂ ಮಾಜಿ ಸದಸ್ಯರಾದ ಹೊ ಮ ಲೋಕಪ್ಪ ಗೌಡ ನಿಧನ

ರಿಪ್ಪನ್ ಪೇಟೆ : ಇಲ್ಲಿನ ಕೋಟೆತಾರಿಗ ನಿವಾಸಿ ಜೇನಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಹೊ ಮ ಲೋಕಪ್ಪಗೌಡ ರವರು ವಯೋಸಹಜ ಕಾಯಿಲೆಯಿಂದ ಮೃತರಾಗಿದ್ದಾರೆ.

ಸುಮಾರು 15 ದಿನಗಳಿಂದ ಆರೋಗ್ಯದಲ್ಲಿ ಏರುಪೇರಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ

ಮೃತರು ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.ಜೇನಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದರು.

ಮೃತರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಕೋಟೆತಾರಿಗ ಸಮೀಪದ ಹೊರಲುಕೊಪ್ಪದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

ಸಂತಾಪ : 

ಹೊ ಮ ಲೋಕಪ್ಪಗೌಡರ ನಿಧನಕ್ಕೆ ಹೊಸನಗರ ತಾಲೂಕ್ ಒಕ್ಕಲಿಗ ಸಂಘ ಹಾಗೂ ವಿಶ್ವ ಮಾನವ ಪತ್ತಿನ ಸಹಕಾರ ಸಂಘ ಸಂತಾಪ ಸೂಚಿಸಿದೆ.

ಕಾಂಗ್ರೆಸ್ ಮುಖಂಡರಾದ ಆರ್ ಎಂ ಮಂಜುನಾಥ್ ಗೌಡ,ಎಂ ಬಿ ಲಕ್ಷಣ ಗೌಡ,ಎಂ ಎಂ ಪರಮೇಶ್,ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್,ಜೆಡಿಎಸ್ ಮುಖಂಡರಾದ ಅರ್ ಎ ಚಾಬುಸಾಬ್,ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್,ಅಮೀರ್ ಹಂಜಾ ಹಾಗೂ ರಿಪ್ಪನ್ ಪೇಟೆ ಗ್ರಾಪಂ ಸದಸ್ಯರುಗಳಾದ ಆಸೀಫ಼್ ಭಾಷಾಸಾಬ್ ,ಮಧುಸೂದನ್, ಸುಧೀಂದ್ರ ಪೂಜಾರಿ ಹಾಗೂ ಇನ್ನಿತರ ಮುಖಂಡರು ಹೊ ಮ ಲೋಕಪ್ಪ ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.