ರಿಪ್ಪನ್ ಪೇಟೆ : ಪ್ರಧಾನ ಮಂತ್ರಿ ನರೇಂದ್ರಮೋದಿ ಯವರ 71 ನೇ ಜನ್ಮ ದಿನದ ಪ್ರಯುಕ್ತ ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಮತ್ತು ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಮಹಾಶಕ್ತಿ ಕೇಂದ್ರ ರಿಪ್ಪನ್ ಪೇಟೆ ಘಟಕದ ವತಿಯಿಂದ ಸ್ವಚ್ಚತಾ ಅಭಿಯಾನ ವನ್ನು ನಡೆಸಲಾಯಿತು.
ಪಟ್ಟಣದ ಹೊಸನಗರ ರಸ್ತೆಯ ಚಿಕ್ಕಬೀರನ ಕೆರೆ ಆವರಣದಲ್ಲಿ ಸ್ವಚ್ಚತಾ ಅಭಿಯಾನವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್, ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ,ನಿರೂಪ್ ಕುಮಾರ್ ಬಿಜೆಪಿ ಮುಖಂಡರುಗಳಾದ ಆರ್ ಟಿ ಗೋಪಾಲ್,ಸುರೇಶ್ ಸಿಂಗ್,ಸತೀಶ್ ಎನ್, ಆನಂದ್ ಮೆಣಸೆ , ತ ಮ ನರಸಿಂಹ ಹಾಗೂ ಇನ್ನಿತರರು ಈ ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.



