Categories: Blog

ರಿಪ್ಪನ್ ಪೇಟೆ :ಭೀಕರ ಅಪಘಾತ , ಮರಕ್ಕೆ ಗುದ್ದಿದ ಮರಳು ತುಂಬಿದ್ದ ಟಿಪ್ಪರ್

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ.

ಅಪಘಾತದ ರಭಸಕ್ಕೆ ಟಿಪ್ಪರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಟಿಪ್ಪರ್ ಒಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ಜೆಸಿಬಿ ಯಂತ್ರದ ಮೂಲಕ ಹೊರತೆಗೆಲಾಯಿತು.

ಚಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ.ಚಾಲಕ ಹೊಸನಗರ ಮೂಲದವನು ಎಂದು ತಿಳಿದುಬಂದಿದೆ.ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

4 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

4 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

4 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

11 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

16 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

16 hours ago