ಸಾಗರ: ಇಲ್ಲಿನ ಕಾಂಗ್ರೆಸ್ ಪಕ್ಷದ ಕಛೇರಿ ಮುಂಭಾಗದಲ್ಲಿ ಸಾಗರ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ವತಿಯಿಂದ ಇಂದು ಸಂಜೆ ನಗರ ಅಧ್ಯಕ್ಷರಾದ ಸುರೇಶ್ ಬಾಬು ರವರ ನೇತೃತ್ವದಲ್ಲಿ ಉತ್ತರ ಪ್ರದೇಶದ ಲಖೀಂಪುರ ಗ್ರಾಮದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಅಜಯ್ ಮಿಶ್ರಾ ಅವರ ಪುತ್ರನಾದ ಆಶಿಶ್ ಮಿಶ್ರಾ ವಾಹನವನ್ನು ಚಲಾಯಿಸಿ ಹತ್ಯೆಯನ್ನು ಖಂಡಿಸಿ ಹಾಗೂ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಮೇಣದ ಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಹಾಗು ಮೌನಚಾರಣೆ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ , ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಶ್ರೀಮತಿ ರಾಜನಂದಿನಿ ಕಾಗೋಡು ರವರು ಹಾಗೂ ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಅರ್ ಜಯಂತ್ ರವರು ಮಾತನಾಡಿದರು.
ನಗರಸಭೆ ಸದಸ್ಯರಾದ ಶ್ರೀಮತಿ ಮಧುಮಾಲತಿ, ತಸ್ರೀಫ್, ಗಣಪತಿ ಮಂಡಗಳಲೆ, , ಪ್ರಮುಖರಾದ ಮೈಕಲ್, ಅಶೋಕ ಬೇಳೂರು.ಮಹಾಬಲ ಕೌತಿ, ಅಜೀಂ .ಸಲೀಂ . ಐ.ಜಿ. ಸ್ವರೂಪ್. ನಾಗರಾಜ ಸ್ವಾಮಿ. ಮನೋಜ್ ಕುಗ್ವೆ.ರಮೇಶ್ ಚಂದ್ರಗುತ್ತಿ. ಕಬೀರ್ ಚಿಪ್ಲಿ. ಸಫ್ವಾನ್.ಸಂಜಯ್. ವೆಂಕಟೇಶ್ ಮೆಳವರಿಗೆ. ಕಿರಣ್ ದೊಡ್ಮನೆ.ಜಿಲಾನಿ. ಇನ್ನಿತರ ಕಾರ್ಯಕರ್ತರು ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್