ರಿಪ್ಪನ್ ಪೇಟೆ : ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್‌ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ.ಜಿ ಮಂಜುನಾಥರವರು ಮತ್ತೊಮ್ಮೆ ಸ್ಥಾನಪಡೆದಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಕೊಡಗು ಜಿಲ್ಲೆ ಮಡಿಕೇರಿಯಲ್ಲಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ. ಮಂಜುನಾಥ್ ಅವರು 2021ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 24574ನೇ ಸ್ಥಾನವನ್ನು ಪಡೆಯುವ ಮೂಲಕ ಮತ್ತು ವಿಶ್ವದ ವ್ಯಕ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ 197749ನೇ ಸ್ಥಾನವನ್ನು ಪಡೆದಿರುತ್ತಾರೆ…[ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ]
ಇವರು ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆ ಸಮೀಪದ ಜಂಬಳ್ಳಿ ಗ್ರಾಮದವರು.
“ಅನಲೈಟಿಕಲ್ ಮತ್ತು ಎನರ್ಜಿ ವಿಷಯಗಳ ಕುರಿತು ಸಾಕಷ್ಟು ಸಂಶೋಧನ ಲೇಖನಗಳನ್ನು ಪ್ರಕಟಿಸಿದ್ದಾರೆ”
ಸತತ 2 ವರ್ಷ ಕರ್ನಾಟಕದಿಂದ ಈ ಸಾಧನೆಗೈದ ಶ್ರೀಯುತ ಡಾ ಮಂಜುನಾಥ್ ಅವರು ರಿಪ್ಪನ್ ಪೇಟೆಯ ಕೀರ್ತಿಯನ್ನು ರಾಷ್ಟ್ರಮಟ್ಟದ್ದಲ್ಲಿ ಹೆಚ್ಚಿಸಿದ್ದಾರೆ.
ಹಾಗೂ ಶ್ರೀಯುತರ ಸಾಧನೆಯೂ ಮಂಗಳೂರು ವಿ.ವಿಗೆ ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿಗೆ ಹೆಮ್ಮೆ ತಂದಿದೆ ಎಂದು ಕಾಲೇಜು ಆಡಳಿತ ಮಂಡಳಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ, ಕುಲಪತಿಯವರು, ಕುಲಸಚಿವರು ಮತ್ತು ಪ್ರಾಂಶುಪಾಲರು ಅಭಿನಂದಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್