w
Headlines
Home » ಶಿಕಾರಿಪುರದಲ್ಲಿ ವಿಶ್ವಕರ್ಮ ಸಮುದಾಯ ಭವನ ಉಧ್ಘಾಟಿಸಿದ ಬಿ ಎಸ್ ಯಡಿಯೂರಪ್ಪ

ಶಿಕಾರಿಪುರದಲ್ಲಿ ವಿಶ್ವಕರ್ಮ ಸಮುದಾಯ ಭವನ ಉಧ್ಘಾಟಿಸಿದ ಬಿ ಎಸ್ ಯಡಿಯೂರಪ್ಪ

ಶಿಕಾರಿಪುರದ : ನಗರದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಿರುವ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಗಿದೆ. ಈ ಪುಣ್ಯ ಸಮಯ ನವರಾತ್ರಿ ಸಮಯದಲ್ಲಿ ನಮ್ಮ ಕೆಟ್ಟ ಗುಣವನ್ನು ದೂರಮಾಡಿ ಸಮಾಜಕ್ಕೆ ಪೂರಕವಾದ ಕೆಲಸವನ್ನು ಮಾಡೋಣ. ಹಿಂದು ಧರ್ಮಕ್ಕೆ ಅಪಾರ ಕೊಡುಗೆಯನ್ನು ವಿಶ್ವಕರ್ಮ ಸಮಾಜ ನಾಯಕರು ನೀಡಿದ್ದಾರೆ ಎಂದರು.

 ನಿಕಟ ಪೂರ್ವ ಮುಖ್ಯ ಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಎಲ್ಲಾ ಸಮಾಜದ ದೇವಸ್ಥಾನ ಮತ್ತು ಸಮುದಾಯ ಭವನಕ್ಕೆ ಹಣವನ್ನು ಕೊಡಿಸುವ ಕೆಲಸ ಮಾಡಿದ್ದಾರೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚನ್ನವೀರಪ್ಪ. ಟಿ, ಪುರಸಭೆ ಅಧ್ಯಕ್ಷರಾದ ಲಕ್ಷ್ಮಿ ಮಹಲಿಂಗಪ್ಪ, ಮಲ್ಲಿಕಾರ್ಜುನ ಆಚಾರ್. ಸರಳಮ್ಮ. ಹಾಲಪ್ಪ. ಸಮಾಜದ ಬಂಧುಗಳು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.