ಶಿವಮೊಗ್ಗ : ಇಲ್ಲಿನ ಕೃಷಿ ಕಾಲೇಜಿನ ಜಿ.ಪಿ.ಬಿ. ವಿಭಾಗದ ಮುಖ್ಯಸ್ಥರಾದ ಪ್ರೊ. ಗಂಗಾಪ್ರಸಾದ್ ಅವರ ಮೃತದೇಹ ಹೊನ್ನಾಳಿ ತಾಲೂಕಿನ ಸ ಸಾಸ್ವೆಹಳ್ಳಿ ಸಮೀಪದ ಚಿಕ್ಕಬಾಸೂರು ತಾಂಡದ (ವಿಜಯಪುರ) ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ.
ಶಿವಮೊಗ್ಗ ಬಸವೇಶ್ವರ ನಗರದ ನಿವಾಸಿಯೂ, ಅಪಾರ ವಿದ್ಯಾರ್ಥಿಗಳ ಆಪ್ತ ಗುರುಗಳೂ ಆಗಿದ್ದ ಗಂಗಾಪ್ರಸಾದ್ (59) ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ.ಕೆರೆ ಮಗ್ಗುಲಲ್ಲಿ ಅವರ ಪ್ಯಾಂಟ್, ಚಪ್ಪಲಿ ಪತ್ತೆಯಾಗಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಚಿಕ್ಕಬಾಸೂರು ತಾಂಡ( ವಿಜಯಪುರ) ಬಳಿ ಪತ್ತೆಯಾಗಿರುವ ಇವರ ಶವವನ್ನು ಕಾಲೇಜಿನ ವಿದ್ಯಾರ್ಥಿಯೋರ್ವ ಪತ್ತೆ ಹಚ್ಚಿದ್ದರೆನ್ನಲಾಗಿದೆ. ಅವರನ್ನು ಶಿವಮೊಗ್ಗ ಅಗ್ರಿಕಲ್ಚರಲ್ ಕಾಲೇಜಿನ ಪ್ರೊ.ಗಂಗಾಪ್ರಸಾದ್ ಶವ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೆ ತಿಳಿದುಬರಬೇಕಿದೆ.
ಆತ್ಮಹತ್ಯೆ, ಶಂಕೆ ವ್ಯಕ್ತಪಡಿಸಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್