ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಯುವ ಮುಖಂಡ ಉಲ್ಲಾಸ್ ಆರ್ ರವರು ಆಯ್ಕೆಯಾಗಿದ್ದಾರೆ.
ಹೊಸನಗರ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಹೆಚ್ಚು ಗುರುತಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿರುವ ಯುವ ನಾಯಕರಿಗೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಲ್ಲಿ ಉತ್ತಮ ಹುದ್ದೆ ನೀಡುವಂತೆ ಹೊಸನಗರ ಯುವ ಕಾಂಗ್ರೆಸ್ ಸಮಿತಿಯಿಂದ ಶಿಪಾರಸು ಮಾಡಲಾಗಿತು. ಪಕ್ಷ ಸಂಘಟನೆಯ ಆದಾರದ ಮೇಲೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ರವರ ನಿರ್ದೇಶನದಂತೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಉಲ್ಲಾಸ್ ಅರ್ ಹಾಗೂ ಹೊಸನಗರ ಪಟ್ಟಣದ ಗುರುಮೂರ್ತಿ ಎಂ ರವರನ್ನು ಆಯ್ಕೆ ಮಾಡಲಾಗಿದೆ.
ಪಕ್ಷದಲ್ಲಿ ನಿಷ್ಟಾವಂತರಾಗಿ ಕೆಲಸ ಮಾಡುವ ಯುವಕರಿಗೆ ಹುದ್ದೆ ನೀಡಿರುವುದು ಯುವ ಕಾರ್ಯಕರ್ತರಿಗೆ ಸಂತೋಷವಾಗಿದೆ ಎಂದು ಈ ಸಂಧರ್ಭದಲ್ಲಿ ಉಲ್ಲಾಸ್ ಆರ್ ರವರು ತಿಳಿಸಿದ್ದಾರೆ.
ನೂತನ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಗಳಿಗೆ ಅಭಿನಂದನೆ:
ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಕೆಪಿಸಿಸಿ ವಕ್ತಾರರಾದ ಮಾಜಿ ಶಾಸಕ ಶ್ರೀ ಬೇಳೂರು ಗೋಪಾಲಕೃಷ್ಣ,ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್, ಹೊಸನಗರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹೇಂದ್ರ ಬುಕ್ಕಿವರೆ,ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಆಸೀಪ್ ಬಾಷಾಸಾಬ್,ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ರವರು ನೂತನ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಿಗೆ ಅಭಿನಂದನೆಗಳು ತಿಳಿಸಿದ್ಧಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್