ಶಿವಮೊಗ್ಗ : ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ಘೋಷಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಗೆ ನಾಲ್ವರಿಗೆ ಈ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರದಲ್ಲಿ ಎಲೆಮರೆಕಾಯಿಂತೆ ಕೆಲಸ ಮಾಡಿರುವಕಲಾವಿಧರನ್ನ ಗುರುತಿಸಿ ಅವರಿಗೆ ಪ್ರತಿ ವರ್ಷದಂತೆ ಸರ್ಕಾರ ಪ್ರಶಸ್ತಿ ನೀಡಲಾಗುತ್ತದೆ.
ಅದರಂತೆ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಪ್ರಕಟಗೊಂಡಿದೆ. ಸೇವಾ ಸಿಂಧು ಮೂಲಕ ಸಾರ್ವಜನಿಕರು ಮಾಡಿದ ಶಿಫಾರಸುಗಳನ್ನ ಪರಿಶೀಲಿಸಿ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿರಚಿತವಾಗಿರುವ ಪ್ರಶಸ್ತಿ ಆಯ್ಕೆ ಸಮಿತಿ ಮತ್ತು ಪ್ರಶಸ್ತಿ ಸಲಹಾ ಸಮಿತಿಯ ಮನ್ನಣೆ ನೀಡಿದ ಹೆಸರುಗಳನ್ನ ಆಯ್ಕೆ ಸಮಿತಿ ಫೈನಲೈಸ್ ಮಾಡಿ 66 ಜನರನ್ನ ಆಯ್ಕೆ ಮಾಡಲಾಯಿತು.
ಯೋಗ ಕ್ಷೇತ್ರದಲ್ಲಿ ಬಾಮಾ ಶ್ರೀಕಂಠ, ಯಕ್ಷಗಾನ ಕ್ಷೇತ್ರದಲ್ಲಿ ಗೋಪಾಲಾಚಾರ್ಯ, ಶಿಕ್ಷಣ ಕ್ಷೇತ್ರದಲ್ಲಿ ಪ್ರೊ.ಪಿ.ವಿ.ಕೃಷ್ಣಭಟ್, ಜಾನಪದ ಕ್ಷೇತ್ರದಲ್ಲಿ ಹುಚ್ಚಪ್ಪ ಮಾಸ್ತರ್ ರನ್ನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್