ಶಿವಮೊಗ್ಗ : ಇಲ್ಲಿನ ಬಾಪೂಜಿ ನಗರದ ಮುಖ್ಯರಸ್ತೆ ಗಂಗಾಮತ ಸಂಘದ ವಿದ್ಯಾರ್ಥಿ ನಿಲಯದ ಎದುರು ಒಬ್ಬ ಯುವಕನನ್ನ ಬರ್ಬರ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ನಗರದ ಟ್ಯಾಂಕ್ ಮೊಹಲ್ಲಾದ ತುಂಗಾ ವಿಧ್ಯಾರ್ಥಿನಿಲಯದ ಬಳಿಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತ ನಿಂತಿದ್ದ ಯುವಕನನ್ನು ಏಳು ಜನರ ತಂಡ ಮುಸುಕು ಧರಿಸಕೊಂಡು ಬಂದು ಏಕಾ ಏಕಿಯಾಗಿ ಮಚ್ಚು ಲಾಂಗಿನಿಂದ ಹಲ್ಲೆಮಾಡಿದ್ದಾರೆ. ಇದರ ಪರಿಣಾಮ ಯುವಕ ಸ್ಥಳದಲ್ಲಿ ಸಾವನಪ್ಪಿದ್ದು. ಕೊಲೆಯ ನಂತರ ಕೊಲೆ ಮಾಡಿದವರು ಯುವಕ ಸಾವನಪ್ಪಿದ್ದಾನೋ ಇಲ್ಲವೋ ಎನ್ನುವುದಕ್ಕ ಖಾತರಿ ಪಡಿಸಿಕೊಂಡು ನಂತರ ಸ್ಥಳದಿಂದ ಕಾಲು ಕಿತ್ತಿದ್ದಾರೆ.
ಪಿತೃಪಕ್ಷದ ಹಿನ್ನಲೆಯಲ್ಲಿ ಪರಿಚಯಸ್ಥರ ಮನೆಗೆ ಹೋಗುವಾಗ ಈ ಘಟನೆ ನಡೆದಿದೆ. ಅವೆಂಜರ್ ಬೈಕ್ ನಲ್ಲಿ ಬರುತ್ತಿದ್ದ ಸಂತೋಷ್ ನನ್ನ ಬರ್ಬರ ಹತ್ಯೆ ಮಾಡಲಾಗಿದೆ. ಪೂಜೆ ಮಾಡಿ ಇನ್ನೇನು ವಿಶ್ರಾಂತಿಗೆ ಜಾರಬೇಕು ಅಷ್ಟರೊಳಗೆ ಈ ಘಟನೆ ನಡೆದಿದೆ.
ಆರೋಪಿಗಳು 7 ಜನರೂ ಪರಾರಿಯಾಗಿದ್ದಾರೆ. ಸ್ಥಳೀಯ ಸಿಸಿ ಟಿವಿ ಕ್ಯಾಮೆರಾಗಳೆಲ್ಲಾ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಎಲ್ಲಾ ಹಾಳಾಗಿದೆ. ಈ ಹಿನ್ನಲೆಯಲ್ಲಿ ಆರೋಪಿಗಳನ್ನ ಹುಡುಕುವಲ್ಲಿ ಪೊಲೀಸರಿಗೆ ಕಷ್ಟವಾಗಿದೆ.
ಯುವಕನು ವೀರಭದ್ರೇಶ್ವರ ಚಲನಚಿತ್ರ ಮಂದಿರದ ಬಳಿ ಇರುವ ಕಾರಿನ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ನಗರದ ಹೊರವಲಯದಲ್ಲಿರೋ ಗಾಡಿಕೊಪ್ಪನಿವಾಸಿ ಎಂದು ತಿಳಿದುಬಂದಿದೆ.
ಈ ಹತ್ಯೆಗೆ ಅನೈತಿಕ ಸಂಭಂದವೇ ಕಾರಣವಿರಬಹುದೆಂದು ಅಂದಾಜಿಸಲಾಗಿದೆ.
ಶಿವಮೊಗ್ಗದ ಕೋಟೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ಪ್ರಾರಂಭಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್