Headlines

ಸಾಗರ : ಗಾಂಜಾ ಸೇವನೆ ಮಾಡಿದ್ದ ಮೂವರ ಬಂಧನ : ವಿಶೇಷ ಟೆಸ್ಟಿಂಗ್ ಕಿಟ್ ಮೂಲಕ ಪತ್ತೆ :

ಸಾಗರ: ಗಾಂಜಾ ಸೇವಿಸಿದ ಮೂವರನ್ನು ತಪಾಸಣೆಗೆ ಒಳಪಡಿಸಿದ್ದು, ಅವರು ಮಾದಕ ವಸ್ತು ಸೇವಿಸಿದ ವಿಚಾರ ದೃಢಪಟ್ಟಿದ್ದು, ಅವರನ್ನು ಎನ್.ಡಿ.ಪಿ.ಎಸ್.ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ತಾಲೂಕಿನ ಆವಿನಹಳ್ಳಿ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು ಸಾಗರ ಗ್ರಾಮಾಂತರ ಪೊಲೀಸರು ಸೋಮವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಆಗ ಗಾಂಜಾ ಸೇವಿಸಿರಬಹುದು ಎಂಬ ಅನುಮಾನ ಮೂಡಿದೆ.
ನಂತರ ಅವರನ್ನು ಗಾಂಜಾ ಟೆಸ್ಟಿಂಗ್ ಕಿಟ್ ಮೂಲಕ ಪರೀಕ್ಷಿಸಲಾಗಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಸೊರಬ ಮೂಲದ ಶಶಾಂಕ್, ಸುಮಂತ್, ಶಿಕಾರಿಪುರದ ಮಹೇಶ್ ಎಂಬುವವರನ್ನು ಬಂಧಿಸಲಾಗಿದೆ.

ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

Exit mobile version