ಸಾಗರ : ಪೊಲೀಸರ ಮಿಂಚಿನ ಕಾರ್ಯಾಚರಣೆ : ಅಕ್ರಮ ಗೋ ಕಳ್ಳರ ಬಂಧನ

ಸಾಗರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಅಕ್ರಮವಾಗಿ ಗೋವು ಕಳ್ಳತನ ಮಾಡುತ್ತಿದ್ದ ಗೋ ಕಳ್ಳರನ್ನು ಸಾಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಐದು ಆರೋಪಿ ಗಳನ್ನು ಹಾಗೂ ದನಕಳ್ಳತನಕ್ಕೆ ಬಳಸುತ್ತಿದ್ದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆದಿದ್ದಾರೆ.

ರಾತ್ರಿ ವೇಳೆ ಗೋವುಗಳನ್ನು ವಾಹನದಲ್ಲಿ ತುಂಬಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋ ಕಳ್ಳತನ ಮಾಡುವ  ಐದು ಜನರ ಗುಂಪನ್ನು ವಾಹನ ಸಮೇತ ಶನಿವಾರ  ಸಾಗರ  ಪೇಟೆ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರು ಜಂಟಿಯಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ ಮೂಲದ ಸಯ್ಯದ್ ದಸ್ತಗೀರ್@ ತನ್ನು(24) ವರ್ಷ. ಸಿಖಂದರ್ (32) ತುಂಗಾ ನಗರ. ಅಮಾನುಲ್ಲಾ@ಅಮಾನ್ (22) ಶಿವಮೊಗ್ಗ. ಹಾರ್ನಳ್ಳಿ ಮೂಲದ ಮೊಹಮ್ಮದ್ ರೂಹಿತ್(24) ಹಾಗೂ ಮಂಗಳೂರು ಬಜಿಪೆ ಮೂಲದ ಫೈಝಲ್(37) ಬಂಧಿತ ಆರೋಪಿಗಳು ಹಾಗೂ ಕಪ್ಪು ಬಣ್ಣದ KA 34 M 3701ನೊಂದಾಣಿಯ ಸ್ಕಾರ್ಪಿಯೋ ಕಾರ್ ವಶ ಪಡಿಸಿಕೊಳ್ಳಲಾಗಿದೆ.

ಬಂಧಿತ ಈ ಐದು ಜನರ ತಂಡ ಸಾಗರ. ತೀರ್ಥಹಳ್ಳಿ ಹೊಸನಗರ. ಶಿವಮೊಗ್ಗ ಪಟ್ಟಣ ಮತ್ತು ಗ್ರಾಮಾಂತರ ಭಾಗಗಳಲ್ಲಿ ರಾತ್ರಿ ವೇಳೆ ಗೋವುಗಳನ್ನು ಕಳುವು ಮಾಡಿ ವಾಹನದಲ್ಲಿ ತುಂಬಿ ಸಾಗಾಟ ಮಾಡುತ್ತಿದ್ದರು.ಆರೋಪಿಗಳ ಜಾಡು ಹಿಡಿದು ಹೊರಟ ಸಾಗರ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿ ಹೆಡೆಮುರಿಕಟ್ಟಿದ್ದಾರೆ. ಕರ್ನಾಟಕ ಗೋಹತ್ಯೆ ನಿಷೇಧ ಅಡಿಯಲ್ಲಿ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಜಿಲ್ಲಾ ವರಿಷ್ಠಾಧಿಕಾರಿ ಬಿ. ಎಂ. ಲಕ್ಷ್ಮಿ ಪ್ರಸಾದ್. ಹೆಚ್ಚುವರಿ ರಕ್ಷಾಣಾಧಿಕಾರಿ ಶೇಕರ್ ಟೆಕ್ಕಣ್ಣನವರ್ ಸೂಚನೆಯಂತೆ.* *ಸಾಗರ DYSP ವಿನಾಯಕ್ ಎನ್ ಶೇಟಗೆರಿ ನಿರ್ದೇಶನದಂತೆ ಸಾಗರ ಪೇಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಮತ್ತು ಸಾಗರ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಗಿರೀಶ್* ರವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ  ಕಾರ್ಯಚರಣೆ ನಡೆಸಿ ಗೋ ಕಳ್ಳತನದಲ್ಲಿ ಭಾಗಿಯಾಗಿದ್ದ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕಾರ್ಗಲ್ ಪೊಲೀಸ್ ಠಾಣೆಯ ಪಿ ಐ ತಿರುಮಲೇಶ್ , ಕ್ರೈಮ್  ಸಿಬ್ಬಂದಿಗಳಾದ ಸಂತೋಷ್ ನಾಯ್ಕ್, ಹಜರತ್ ಅಲಿ, ಶ್ರೀಧರ್,ಅಶೋಕ್.ತಾರಾನಾಥ್. ಬಸವರಾಜ್, ರಮೇಶ್, ಮಲ್ಲೇಶ,ಜಯಂತ್  ರಾಘು, ರವಿ, ಪ್ರಕಾಶ್ ಅಂಬಳಿ ಹಾಗೂ ಇನ್ನಿತರರು ಕಾರ್ಯಾಚರಣೆಯಲ್ಲಿದ್ದರು.

ದನ ಕಳ್ಳತನ ಮಾಡುತಿದ್ದ ಖದೀಮರ ಹೆಡೆ ಮುರಿ ಕಟ್ಟಿದ ಸಾಗರ ಪೊಲೀಸ ಕಾರ್ಯ ವೈಖರಿಗೆ ಸಾಮಾಜಿಕ ಜಾಲತಾಣಗಳಲ್ಲಿ  ಪ್ರಶಂಸೆಯ ಮಹಾ ಪೂರವೆ ಹರಿದು ಬರುತ್ತಿದೆ..”

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

50 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago