ಸಾಗರ: ತಾಲ್ಲೂಕಿನ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದಲ್ಲಿ ಅಕ್ಟೋಬರ್ 07 ರಿಂದ 15ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಎಸ್ ರಾಮಪ್ಪನವರು ತಿಳಿಸಿದರು.
ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಅಕ್ಟೋಬರ್ 07ರಂದು ಗೌರಿಗದ್ದೆಯ ಅರಿವಿನ ಗುರು ಅವದೂತ ಶ್ರೀ ವಿನಯ್ ಗುರೂಜಿ ಆಗಮಿಸಲಿದ್ದು ಅಂಧಕಾರದಿಂದ ಬೆಳಕಿನೆಡೆಗೆ ಎಂಬ ವಿಶೇಷ ಆಶೀರ್ವಚನ ನೀಡಲಿದ್ದಾರೆ.
ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನವರಾತ್ರಿ ಹಿನ್ನೆಲೆಯಲ್ಲಿ ಪ್ರತಿ ದಿನ ಶ್ರೀ ದೇವಿಗೆ ಪಂಚಾಮೃತ ಅಭಿಷೇಕ. ಅಲಂಕಾರ ಪೂಜೆ. ಮಹಾಭೀಷೇಕ. ಚಂಡಿಕಾ ಹೋಮ. ಸಪ್ತಶತೀ ಪಾರಾಯಣ. ವಿವಿಧ ಹವನಗಳು ನೆಡೆಯಲಿದೆ. ಚೌಡಮ್ಮ ದೇವಿ ಯಕ್ಷಗಾನ ಮೇಳದಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.
ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವತ್ತ ಹೆಜ್ಜೆ ಇಟ್ಟಿರುವ ಸಿಗಂದೂರು ಎಜುಕೇಶನ ಅಂಡ್ ಚಾರಿಟೇಬಲ್ ಟ್ರಸ್ಟ್.
ಶ್ರೀ ಸಿಗಂದೂರು ಚೌಡಮ್ಮ ದೇವಿ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ ಸಿಗಂದೂರು ಕಳೆದ ಹಲವು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಸೇವಾ ಕಾರ್ಯವನ್ನು ಮಾಡುತ್ತಾ ಬಂದಿದೆ.ಅದರಂತೆ ಈ 2021-22ನೇ ವರ್ಷದಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ಶೈಕ್ಷಣಿಕ ದೇಗುಲವಾದ ಸರ್ಕಾರಿ ಶಾಲೆಗಳ ಉಳಿಸುವಿಕೆ ಮತ್ತು ಅಂದ ಚಂದದ ಸುಂದರವಾದ ಶಾಲೆಯಾಗಿಸಲು ಸರ್ಕಾರಿ ಶಾಲೆಗಳ ಉಳಿವಿಗೆ ಶ್ರೀ ಕ್ಷೇತ್ರ ಸಿಗಂದೂರು ಎಜುಕೇಷನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಒಂದು ಹೆಜ್ಜೆ ಮುಂದಿಟ್ಟಿದೆ.
ಶ್ರೀ ಕ್ಷೇತ್ರ ಸಿಗಂದೂರಿನ ಪ್ರಧಾನ ಕಾರ್ಯದರ್ಶಿಗಳಾದ ಹೆಚ್ ಆರ್ ರವಿಕುಮಾರ್ ಅವರ ವಿಶೇಷ ಕಾಳಜಿಯಿಂದ ಶರಾವತಿ ಹಿನ್ನೀರಿನ ಹಿಂದುಳಿದ ಆಯ್ದ ಸುಮಾರು 10 ಸರ್ಕಾರಿ ಶಾಲೆಗಳಿಗೆ ಸುಣ್ಣ ಬಣ್ಣ ಮಾಡುವ ವಿಶೇಷ ಕಾಯಕಲ್ಪಕ್ಕೆ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸಿರುವುದು ಈ ಭಾಗದ ಜನರಿಗೆ ಹಾಗೂ ಶಿಕ್ಷಕರಿಗೆ ಸಂತಸ ತಂದಿದೆ. “ಶ್ರೀ ಕ್ಷೇತ್ರ ಸಿಗಂದೂರಿನ ಚಿತ್ತ ಸರ್ಕಾರಿ ಶಾಲೆಗಳತ್ತ” ಎಂಬ ವಿಶೇಷ ಮುನ್ನುಡಿಯೊಂದಿಗೆ ಅಕ್ಟೋಬರ್ 02ರ ಮಹಾತ್ಮ ಗಾಂಧಿ ಜಯಂತಿಯಂದು ತಾಲ್ಲೂಕಿನ ತೀರಾ ಹಿಂದುಳಿದ ಪ್ರದೇಶವಾದ ಚನ್ನಗೊಂಡ ಗ್ರಾಮದ ಕಟ್ಟಿನಕಾರು ಕ್ಲಸ್ಟರ್ ನಲ್ಯಾರ ಸರ್ಕಾರಿ ಶಾಲೆಗೆ ಹೊಸ ರೂಪ ನೀಡುವ ಮೂಲಕ ಧರ್ಮಾಧಿಕಾರಿಗಳಾದ ಡಾ ಎಸ್ ರಾಮಪ್ಪನವರ ದಿವ್ಯಾಶೀರ್ವಾದದೊಂದಿಗೆ ನಡೆಯಿತು.
ಶರಾವತಿ ಹಿನ್ನೀರಿನ ಸುಮಾರು 10 ಸರ್ಕಾರಿ ಶಾಲೆಗಳಿಗೆ ನಮ್ಮೂರ ಶಾಲಾ ಅಂದ ಚೆಂದದ ಅಂಗವಾಗಿ ಶ್ರೀ ಸಿಗಂದೂರು ಚೌಡಮ್ಮ ದೇವಿ ಎಜುಕೇಷನ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲೆಗಳಿಗೆ ಸುಣ್ಣ ಬಣ್ಣ ಮಾಡಲಾಗಿದ್ದು ಸಿಗಂದೂರು ದೇವಸ್ಥಾನದ ವತಿಯಿಂದ ಶರಾವತಿ ಹಿನ್ನೀರಿನ ಸರ್ಕಾರಿ ಶಾಲೆಗಳ ಉಳಿವಿಗೆ ಹೆಚ್ಚಿನ ಒತ್ತು ನೀಡಿರುವುದು ಉತ್ತಮ ಬೆಳವಣಿಗೆಯಾಗಿದೆ.