Headlines

ಅ.30ರ ಶನಿವಾರ ಶಿವಮೊಗ್ಗಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ !

ಶಿವಮೊಗ್ಗ : ವಿವಿಧ ಕಾರ್ಯಕ್ರಮಗಳ ನಿಮಿತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅ. 30ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.  ಅಂದು ಬೆಳಗ್ಗೆ 10 ಗಂಟೆಗೆ  ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 11 ಗಂಟೆಗೆ  ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.  ಅನಂತರ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಆಯೋಜಿಸಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ನಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಗೆ ಭೇಟಿ ನೀಡಿ  ಸಭೆಯಲ್ಲಿ ಭಾಗಿಯಾಗಲಿದ್ದಾರೆ.  ಸಂಜೆ 4 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ. 

Read More

ಗೃಹಸಚಿವರ ಸ್ವ ಕ್ಷೇತ್ರದ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು !!!

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರಾದ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ಇಂದು ನೆಡೆದಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳು ಜಯಭೇರಿಯನ್ನು ಬಾರಿಸಿದ್ದಾರೆ.  ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಶಬನಂ ಹಾಗೂ ಜಯಪ್ರಕಾಶ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು.  ಬಿಜೆಪಿಯಿಂದ ಜ್ಯೋತಿ ಮೋಹನ್ ಹಾಗೂ ರವೀಶ್ ( ಬಾಬೀ )  ನಾಮಪತ್ರ ಸಲ್ಲಿಸಿದ್ದರು.  ಆಪರೇಷನ್ ಕಮಲದ ಬಗ್ಗೆ ತೀರ್ಥಹಳ್ಳಿಯಲ್ಲಿ ಬಾರಿ ಚರ್ಚೆ ನೆಡೆದಿದ್ದರು ಇಂದು ಸಂದೇಶ್ ಜವಳಿ ಮಾತನಾಡಿ…

Read More

ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ರಿಪ್ಪನ್ ಪೇಟೆಯ ಡಾ. ಜೆ ಜಿ ಮಂಜುನಾಥ್

 ರಿಪ್ಪನ್ ಪೇಟೆ : ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್‌ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ.ಜಿ ಮಂಜುನಾಥರವರು ಮತ್ತೊಮ್ಮೆ ಸ್ಥಾನಪಡೆದಿದ್ದಾರೆ.  ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಕೊಡಗು ಜಿಲ್ಲೆ ಮಡಿಕೇರಿಯಲ್ಲಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ  ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ. ಮಂಜುನಾಥ್ ಅವರು 2021ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 24574ನೇ ಸ್ಥಾನವನ್ನು ಪಡೆಯುವ ಮೂಲಕ ಮತ್ತು ವಿಶ್ವದ ವ್ಯಕ್ತಿ…

Read More

ಗೃಹ ಸಚಿವರ ಜಿಲ್ಲೆಯಲ್ಲಿ ಮಿತಿಮೀರಿದ ರೌಡಿಗಳ ಹಾವಳಿ! ಜೀವ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರರವರ ಜಿಲ್ಲೆಯಲ್ಲೇ ರೌಡಿಗಳ ಹಾವಳಿ ಮಿತಿಮೀರಿದೆ. ರೌಡಿಗಳು ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಿವಮೊಗ್ಗದ ಕುಖ್ಯಾತ ರೌಡಿ ಬಚ್ಚಾ ಅಲಿಯಾಸ್ ಜಮೀರ್ ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಹಣ ನೀಡುವಂತೆ ಹೆದರಿಸಲು ಜಮೀರ್ ಸಹಚರರು ಉದ್ಯಮಿ ಮನೆ ಮೇಲೆ ದಾಳಿ ನಡೆಸಿದ್ದು, ಈ ಪ್ರಕರಣ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಜಮೀರ್ ಶಿವಮೊಗ್ಗದ ಶಾದ್ ನಗರದ ಉದ್ಯಮಿಯಾಗಿರುವ ಅನ್ಸರ್ ಎಂಬುವವರಿಗೆ…

Read More

ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ :

ತೀರ್ಥಹಳ್ಳಿ : ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಪಕ್ಷ ಗಾದಿ ಹಿಡಿಯಲು ಬಹುತೇಕ ಸಜ್ಜಾಗಿದ್ದು ಮಹಿಳಾ ಅಭ್ಯರ್ಥಿಗಳು ಅಧ್ಯಕ್ಷರಾಗುತ್ತಾರೆ ಎಂದು ಹೇಳಲಾಗುತ್ತಿದೆ.  ಬಿಜೆಪಿ ಪಕ್ಷ ಈ ಬಾರಿ ವಿರೋಧ ಪಕ್ಷದಲ್ಲಿ ಕೂರುವುದು ಖಚಿತವಾದಂತೆ ಕಾಣಿಸುತ್ತಿದೆ. ಕಾರಣ ಆರಗ ಜ್ಞಾನೇಂದ್ರ ಅವರು ನಾಳೆ ತೀರ್ಥಹಳ್ಳಿಯಲ್ಲಿ ಇರುವುದಿಲ್ಲ ಎಂದು ತಿಳಿಸಿದ್ದು ಅವರ ಮತ ಬೀಳುವುದು ಅನುಮಾನ ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರದಲ್ಲಿ ಕೂರುವುದು ಖಚಿತವಾಗಿದೆ. …

Read More

ಆಕ್ರಮ ಮರಳು ಸಾಗಾಟಕ್ಕೆ ದಿಟ್ಟ,ನಿರ್ದಾಕ್ಷಿಣ್ಯ ಕ್ರಮ:ವಿ ಎಸ್ ರಾಜೀವ್

ಹೊಸನಗರ :: ತಾಲ್ಲೂಕಿನಲ್ಲಿ ದಿನಂಪ್ರತಿ ಅಕ್ರಮ ಮರಳು ಸಾಗಾಟ ಹಾಗೂ ಆಕ್ರಮವಾಗಿ ಕಲ್ಲು ಕ್ವಾರಿಗಳ ಆರ್ಭಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕರು ದೂರುಗಳನ್ನು ನಮ್ಮ ಗಮನಕ್ಕೆ ತಂದಿದ್ದು,ಆಕ್ರಮಕ್ಕೆ ಕಡಿವಾಣ ಹಾಕುವ ಸಲುವಾಗಿ ಹೊಸನಗರ ತಾಲ್ಲೂಕಿನ ಹಲವು ಅಧಿಕಾರಿಗಳಿಗೆ ಅಕ್ರಮವಾಗಿ ಕಲ್ಲು,ಮರಳು ತುಂಬಿದ ವಾಹನಗಳನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಾಲ್ಲೂಕಿನ ಅಧಿಕಾರಿಗಳಿಗೆ  ಸಂದೇಶ ರವಾನಿಸಿದ್ದಾರೆ. ಈ ಕುರಿತು ಹೊಸನಗರ ತಾಲೂಕು ಕಚೇರಿಯ ಸಭಾಂಗಣದಲ್ಲಿ ಮಾತನಾಡಿದ ತಹಶಿಲ್ದಾರವರು ಸಾರ್ವಜನಿಕರು ನಮ್ಮ ಅಧಿಕಾರಿಗಳ ಬಗ್ಗೆ…

Read More

ಮಾಜಿ ಸಿಎಂ ಬಂಗಾರಪ್ಪ 88ನೇ ಹುಟ್ಟು ಹಬ್ಬ: ಪುತ್ರ ಕುಮಾರ್ ಬಂಗಾರಪ್ಪರಿಂದ ಪೂಜೆ

ಶಿವಮೊಗ್ಗ: ಅಕ್ಷರ, ಅಕ್ಷಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ರಾಜ್ಯಕ್ಕೆ ನೀಡಿದ ಹಿಂದುಳಿದ ನಾಯಕ, ಮಾಜಿ ಸಿಎಂ, ದಿವಂಗತ ಎಸ್.ಬಂಗಾರಪ್ಪರ 88ನೇ ವರ್ಷದ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಅತ್ಯಂತ ಅಭಿಮಾನದಿಂದ ಆಚರಿಸುತ್ತಿದ್ದಾರೆ. ಬಂಗಾರಪ್ಪ ಪುತ್ರ ಸೊರಬ ಶಾಸಕ ಕುಮಾರ ಬಂಗಾರಪ್ಪ ಇಂದು ಸೊರಬದ ಬಂಗಾರಧಾಮದಲ್ಲಿ ಇರುವ ಬಂಗಾರಪ್ಪ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಬಸ್ ನಿಲ್ದಾಣದ ಪಕ್ಕದಲ್ಲಿ ಇರುವ ಬಂಗಾರಪ್ಪ ಉದ್ಯಾನವನದಲ್ಲಿನ ಬಂಗಾರಪ್ಪ ಪುತ್ಥಳಿಗೆ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಶಿವಮೊಗ್ಗದಲ್ಲಿ ಜಿಲ್ಲಾ ಈಡಿಗರ…

Read More

ಐದು ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ :ಇಬ್ಬರು ಆರೋಪಿಗಳ ಬಂಧನ

ಶಿರಸಿ : ಐದು ಕೋಟಿ ಮೌಲ್ಯದ ನಿರ್ಬಂಧಿತ ತಿಮಿಂಗಿಲದ ವಾಂತಿ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ. ಡಿ.ವೈ.ಎಸ್.ಪಿ ರವಿ ಡಿ ನಾಯ್ಕ ರವರ ನೇತ್ರತ್ವದಲ್ಲಿ ಸಿಪಿಐ ರಾಮಚಂದ್ರ ನಾಯಕ್ ,ಪಿ.ಎಸ್.ಐ ಭೀಮಾಶಂಕರ್ ,ಪಿ.ಎಸ್.ಐ ಈರಯ್ಯ ನೇತ್ರತ್ವದಲ್ಲಿ ದಾಳಿ ನಡೆದಿದ್ದು ಐದು ಕೋಟಿ ಮೌಲ್ಯದ ಐದು ಕೆಜಿ ತಿಮಿಂಗಿಲದ ವಾಂತಿ (ಅಂಬೆ ಗ್ರೀಸ್) ಅನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಮೂಲದ ಸಂತೋಷ್ ಕಾಮತ್ ,ಶಿರಸಿಯ ರಾಜೇಶ್ ಪೂಜಾರಿ ಬಂಧಿತ ಆರೋಪಿಗಳಾಗಿದ್ದು,ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲರನ್ನ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಪ್ರತಿಕೃತಿ ದಹನ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇಂದು ಪಟ್ಟಣದ ಮಹಾವೀರ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು. ರಾಹುಲ್ ಗಾಂಧಿಯನ್ನ ಡ್ರಗ್ ಪೆಡ್ಲರ್ ಎಂದು ಹೇಳಿದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿದ ತಪ್ಪುಗಳನ್ನ ಮರೆಮಾಚಿಸಲು ಜನರ ಗಮನ ಬೇರೆಡೆ ತಿರುಗುವಂತೆ ಮಾಡಲು ಬಿಜೆಪಿ ಯತ್ನಿಸುತ್ತಿದ್ದು…

Read More

ಸಾಗರ : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಅಕ್ರಮ ಗೋ ಕಳ್ಳರ ವಿರುದ್ಧ ಪ್ರತಿಭಟನೆ

ಸಾಗರ:ಗೋವು ಕಳ್ಳರನ್ನು ಬಂಧಿಸುವಂತೆ ಆಗ್ರಹಿಸಿ ಸಾಗರದ ಮಾರಿಕಾಂಬ ದೇವಸ್ಥಾನ ಎದುರು ಇಂದು ಸಾಗರದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಸಾಗರದ ಮಾರಿಕಾಂಬ ದೇವಸ್ಥಾನದ ತವರು ಮನೆ ಎದುರು ಗೋವು ಪೂಜೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು.   ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ಪ್ರತಿಭಟನೆಯನ್ನು ಮುಂದುವರೆಸುವ ತೀರ್ಮಾನವನ್ನು ವಿಹಿಂಪ ಮತ್ತು ಬಜರಂಗದಳ ತೆಗೆದುಕೊಂಡಿದೆ. ಸಾಗರದ ಬಿ.ಹೆಚ್.‌ರಸ್ತೆಯ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆಯನ್ನು ಮಾಡಲಾಗುವುದೆಂದು    ಪ್ರತಿಭಟನಾಕಾರರು ಹೇಳಿದ್ದಾರೆ. ಸರಕಾರದ ವಿರುದ್ದ, ಪೋಲೀಸರ ವಿರುದ್ದ…

Read More