ಕಾಂಗ್ರೆಸ್ಸಿಗರು ಹತಾಶರಾಗಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ : ಸಚಿವ ಆರಗ ಜ್ಞಾನೇಂದ್ರ
ಶಿವಮೊಗ್ಗ : ರಾಜ್ಯದ ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಇದನ್ನು ಅರಿತಿರುವ ಕಾಂಗ್ರೆಸ್ಸಿಗರು ಹತಾಶರಾಗಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನಾಯಕರ ಅಪ ಪ್ರಚಾರ ಇಲ್ಲದಿದ್ದರೆ ಕೋವಿಡ್ 2ನೇ ಡೋಸ್ ನೀಡಿಕೆಯಲ್ಲಿ ಇನ್ನಷ್ಟು ಪ್ರಗತಿ ಆಗುತ್ತಿತ್ತು. ಆದಾಗ್ಯೂ, ಇಡೀ ವಿಶ್ವವೇ ಮೆಚ್ಚುವಂತಹ ರೀತಿ ಕೊರೊನಾ ಲಸಿಕೆ…