ಶಿವಮೊಗ್ಗ ಜಿಲ್ಲೆಯಲ್ಲಿ ಭೂಮಿ ಹುಣ್ಣಿಮೆ ಹಬ್ಬದ ಸಡಗರ: ಭೂ ತಾಯಿಗೆ ಪೂಜೆ ಸಲ್ಲಿಸಿದ ಅನ್ನದಾತರು
ಶಿವಮೊಗ್ಗ: ಜಿಲ್ಲೆಯಲ್ಲಿ ಅನ್ನದಾತರು ಭೂಮಿ ಹುಣ್ಣಿಮೆ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಜಿಲ್ಲೆಯ ಸಾಗರ, ಹೊಸನಗರ, ಸೊರಬ, ತೀರ್ಥಹಳ್ಳಿ, ಶಿವಮೊಗ್ಗ ತಾಲೂಕಿನಲ್ಲಿ ಈ ಹಬ್ಬವನ್ನ ವಿಶೇಷವಾಗಿ ಆಚರಣೆ ಮಾಡಲಾಗುತ್ತೆ. ಭೂಮಿ ಹುಣ್ಣಿಮೆ ಮಲೆನಾಡಿನ ಹಳ್ಳಿಗರಿಗೆ ವಿಶೇಷ ಹಬ್ಬ. ಅದರಲ್ಲೂ ಗದ್ದೆ, ತೋಟ ಹೊಂದಿರುವವರಿಗೆ ಈ ದಿನ ಹೊಸ ಸಡಗರ. ನಸುಕಿನಿಂದಲೇ ಹಬ್ಬದ ಸಿದ್ಧತೆಗಳು ಆರಂಭವಾಗುತ್ತವೆ. ವಿವಿಧ ಜಾತಿಯ ಸೊಪ್ಪನ್ನು ಬೆಟ್ಟದಿಂದ ಕೊಯ್ದು ತರುವ ಅನ್ನದಾತರು ಅದನ್ನು ಬೇಯಿಸುತ್ತಾರೆ. ಇದರ ಮಿಶ್ರಣಕ್ಕೆ ‘ಚರಗ’ ಎನ್ನುತ್ತಾರೆ. ಈ ಮಿಶ್ರಣವನ್ನು…