w
Headlines
Home » ಶಿವಮೊಗ್ಗ : ಶಂಕಿತ ಉಗ್ರ ಸೇರಿ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ :

ಶಿವಮೊಗ್ಗ : ಶಂಕಿತ ಉಗ್ರ ಸೇರಿ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ :

ಶಿವಮೊಗ್ಗ : ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣದ ವಿಚಾರಣೆಗೆ ಸಂಬಂಧ ಶಂಕಿತ ಉಗ್ರ ಸೇರಿದಂತೆ ಇಬ್ಬರನ್ನು ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರಿನಿಂದ ಕರೆತರಲಾಗಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಾಗೇಂದ್ರ ಎಂಬುವವರನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ.

ಇಬ್ಬರು ಆರೋಪಿಗಳನ್ನು ಪೊಲೀಸರು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಬ್ಬರನ್ನು ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.ಉದ್ಯಮಿಗೆ ಬೆದರಿಕೆ ಪ್ರಕರಣ ಸಂಬಂಧ  ವಿಚಾರಣೆ ನಡೆಯಲಿದೆ.

ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ನಾಗೇಂದ್ರನನ್ನು ಬಿಗಿ ಭದ್ರತೆಯಲ್ಲಿ ಶಿವಮೊಗ್ಗಕ್ಕೆ ಕರೆತರಲಾಯಿತು. ನ್ಯಾಯಾಲಯದ ಆವರಣದಲ್ಲಿಯು ಭದ್ರತೆ ನಿಯೋಜಿಸಲಾಗಿತ್ತು.

ಪ್ರಕರಣದ ಹಿನ್ನಲೆ :

ಕುಖ್ಯಾತ ರೌಡಿಶೀಟರ್ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯೊಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.

 ಉದ್ಯಮಿಯೊಬ್ಬರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಾಹಿರಾ ಬಾನು ಎಂಬ ಮಹಿಳೆಯನ್ನು ಶಿವಮೊಗ್ಗ ಸೈಬರ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮಹಿಳೆಯ ಪತಿ ಸದ್ದಾಂ ಹುಸೇನ್ ಬೆಂಗಳೂರಿನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಈತ ಜೈಲಿನಿಂದಲೇ ಶಿವಮೊಗ್ಗದ ಉದ್ಯಮಿಗೆ ವಾಟ್ಸಪ್ ಕಾಲ್ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ.ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದಾನೆ.

 ಮಲೆನಾಡಿನಲ್ಲಿ ಹೆಬ್ಬೆಟ್ ಮಂಜನ ಹೆಸರು ಚಾಲ್ತಿಯಲ್ಲಿದೆ. ಆತನ ಸಹಚರರು ಫುಲ್ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ಹೆಬ್ಬೆಟ್ ಮಂಜನ ಗ್ಯಾಂಗ್ ಮಲೆನಾಡಿನಲ್ಲಿ ಅಕ್ರಮ ಮರಳು ದಂಧೆ ಸೇರಿದಂತೆ ಇತರೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಈ ಎಲ್ಲ ಚಟುವಟಿಕೆಗಳು ಹೆಬ್ಬೆಟ್ ಮಂಜನ ಹೆಸರಿನಲ್ಲಿ ನಡೆಯುತ್ತಿವೆ.

ಬೆದರಿಕೆ ಕರೆ ಬಂದಿದ್ದಾಗ ಉದ್ಯಮಿ ಒಮ್ಮೆ 50 ಸಾವಿರ ರೂ. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದೇ ತಡ ಶಿವಮೊಗ್ಗ ಸೈಬರ್ ಠಾಣೆಯ ಸಿಪಿಐ ಗುರುರಾಜ್ ತಮ್ಮ ತಂಡದ ಜೊತೆ ಭಟ್ಕಳಗೆ ಹೋಗಿ ಆಪರೇಶನ್​ಗೆ ಮುಂದಾಗಿದ್ದರು. ಮಹಿಳೆ ಖಾತೆಯ ಜಾಡು ಹಿಡಿದು ತನಿಖೆ ಕೈಗೊಂಡಾಗ ಭಟ್ಕಳದ ಸಾಹಿರಾ ಬಾನು ಅವರದ್ದು ಎಂಬುದು ಗೊತ್ತಾಗಿದೆ.

ಪರಪ್ಪನ ಅಗ್ರಹಾರದಲ್ಲಿರುವ ಸದ್ದಾಂ ಹುಸೇನ್ ಬೆಂಗಳೂರಿನ ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಸ್ಪೋಟಕ್ಕೆ ಬೇಕಾಗಿರುವ ಜೆಲೆಟಿನ್ ಕಡ್ಡಿಯನ್ನು ಈತನೇ ಪೂರೈಕೆ ಮಾಡಿದ್ದನು. ಭಟ್ಕಳದಲ್ಲಿ ಸದ್ದಾಂ ಮೇಲೆ ವಿವಿಧ ಕೇಸ್ ಗಳು ಕೂಡಾ ದಾಖಲು ಆಗಿವೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.