Headlines

ಶಿವಮೊಗ್ಗದಲ್ಲಿ ಚಿರತೆ ದಾಳಿ : ದನ-ಕರು ಸಾವು

ಶಿವಮೊಗ್ಗ: ಚಿರತೆ ದಾಳಿಯಿಂದ ದನ ಹಾಗೂ ಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಉಂಬ್ಳೇಬೈಲು ಸಮೀಪದ ಸಾಲಿಗೆರೆ ಗ್ರಾಮದಲ್ಲಿ ನಡೆದಿದೆ.

ನಿನ್ನೆ ತಡರಾತ್ರಿ ಸಾಲಿಗೆರೆ ಗ್ರಾಮದ ಕೃಷ್ಣಮೂರ್ತಿ ಎಂಬುವರ ಮನೆಯ ಕೊಟ್ಟಿಗೆಗೆ ನುಗ್ಗಿದ ಚಿರತೆ ದನ ಹಾಗೂ ಕರು ಮೇಲೆ ದಾಳಿ ಮಾಡಿದೆ. ಈ ಘಟನೆಯಿಂದ ಗ್ರಾಮದಲ್ಲಿ ಚಿರತೆ ದಾಳಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕೆಲ ದಿನಗಳ ಹಿಂದಷ್ಟೇ ಸಾಲಿಗೆರೆಯ ಗ್ರಾಮಸ್ಥರು ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದರು. ಉಂಬ್ಳೇಬೈಲು, ಸಾಲಿಗೆರೆ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿಗೆ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿರುವುದು ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *