w
Headlines
Home » ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ: ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ..!

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ: ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ..!


ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಮಹಿಳೆ ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಸಂಬಂಧಿಕರನ್ನು ಬಿಡಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆ ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುವ ಇಂಟರ್‌ಸಿಟಿ ರೈಲಿನ ಒಳಗೆ ಪ್ರಯಾಣಿಕರೊಂದಿಗೆ ಹತ್ತಿದ್ದಾರೆ. ಬಳಿಕ ರೈಲು ಚಲಿಸಲು ಆರಂಭವಾಗುತ್ತಿದ್ದಂತೆ ಕೆಳಗೆ ಇಳಿಯಲು ಪ್ರಯತ್ನಿಸಿದ್ದು, ಈ ವೇಳೆ ಆಯತಪ್ಪಿ ರೈಲಿನಿಂದ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸ್ ಅಣ್ಣಪ್ಪ ಹಾಗೂ ಸಂತೋಷ್ ಮಹಿಳೆಯನ್ನು ರಕ್ಷಿಸಿದ್ದಾರೆ.

ರೈಲ್ವೆ ಪೊಲೀಸರ ಸಮಯ ಪ್ರಜ್ಞೆ ಅದೃಷ್ಟವಶಾತ್​ ಯಾವುದೇ ಅಪಾಯ ಸಂಭವಿಸಿಲ್ಲ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.