w
Headlines
Home » ದ್ವಿಚಕ್ರ ವಾಹನ ತಪ್ಪಿಸಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಮೇಲೆ ಹರಿಹಾಯ್ದ ಲಗೇಜ್ ಆಟೋ :

ದ್ವಿಚಕ್ರ ವಾಹನ ತಪ್ಪಿಸಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಮೇಲೆ ಹರಿಹಾಯ್ದ ಲಗೇಜ್ ಆಟೋ :

ಸಾಗರ: ದ್ವಿಚಕ್ರ ವಾಹನವನ್ನು ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರೂ ಯುವತಿಯರಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದು ಅಪಘಾತವಾಗಿರುವ ಘಟನೆ ಸಾಗರದಲ್ಲಿ ಸಂಜೆ ನಡೆದಿದೆ.

ಸಾಗರ ನಗರ ಬಿಹೆಚ್ ರಸ್ತೆಯಲ್ಲಿ ಇರುವ ಸುಜುಕಿ ಶೋರೂಮ್ ಎದುರು ಶುಕ್ರವಾರ ಸಂಜೆ ಲಗೇಜ್ ಆಟೋ ಒಂದು ಅಚಾನಕ್ಕಾಗಿ ರಸ್ತೆಯ ಮಧ್ಯ ಬಂದ ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಸ್ಎನ್ ನಗರದ ನಾಲ್ಕನೇ ತಿರುವಿನ ವಾಸಿಗಳಾದ ಆಫ಼್ರೀನ್ ಹಾಗೂ ಶಮ್ರೀನ್ ಎಂಬ  ಇಬ್ಬರು ಯುವತಿಯರಿಗೆ ಡಿಕ್ಕಿ ಹೊಡೆದು ಅಪಘಾತವಾಗಿರುವ ಘಟನೆ ನಡೆದಿದೆ.
ಅಪಘಾತಕ್ಕೀಡಾಗಿರುವ ಯುವತಿಯರು ಕಂಪ್ಯೂಟರ್ ಕ್ಲಾಸ್ ಮುಗಿಸಿಕೊಂಡು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.ಅಪಘಾತದಲ್ಲಿ ಶಮ್ರೀನ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮತ್ತೊಂದು ಯುವತಿ ಆಫ಼್ರೀನ್ ಪರಿಸ್ಥಿತಿ ಸ್ಥಿತಿಚಿಂತಾಜನಕವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು ಆದರೆ ತಲೆಗೆ ತೀವ್ರವಾದ ಪೆಟ್ಟಾಗಿರುವುದರಿಂದ ಮೆಗ್ಗಾನ್ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮ್ಯಾಕ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದಾರೆ  ಎಂದು ಮಾಹಿತಿ ಲಭ್ಯವಾಗಿದೆ.
ಸಂಜೆ ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸಾಗರ ಉಪ ಪೊಲೀಸ್ ಅಧೀಕ್ಷಕರಾದ ರೋಹನ್ ಜಗದೀಶ್ ರವರು ಅಪಘಾತಕ್ಕೀಡಾದ ಯುವತಿಯರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟು ಅಪಘಾತದ ಮಾಹಿತಿ ಪಡೆದುಕೊಂಡಿದ್ದಾರೆ.





ಮೈ ಜುಮ್ಮೆನಿಸುವ ವೀಡಿಯೋ ಈ ಕೆಳಗೆ ವೀಕ್ಷಿಸಿ:








Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.