w
Headlines
Home » ರಸ್ತೆ ಮತ್ತು ಸರ್ಕಲ್ ಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟು ಗೌರವ ಸಲ್ಲಿಸಿದ ಸಾರ್ವಜನಿಕರು :

ರಸ್ತೆ ಮತ್ತು ಸರ್ಕಲ್ ಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟು ಗೌರವ ಸಲ್ಲಿಸಿದ ಸಾರ್ವಜನಿಕರು :

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಸ್ತೆ ಮತ್ತು ಸರ್ಕಲ್’ಗೆ ಅವರ ಹೆಸರು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ರಸ್ತೆಗಳಿಗೆ ಪುನೀತ್ ರಾಜಕುಮಾರ್ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ.

ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಪಕ್ಕದ 1 ಕಿಮೀ ಚಾನಲ್ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ಸಾರ್ವಜನಿಕರೇ ನಾಮಕರಣ ಮಾಡಿದ್ದಾರೆ. ಇದೆ ಹೆಸರನ್ನು ಅಧಿಕೃತಗೊಳಿಸುವಂತೆ ಮಹಾನಗರ ಪಾಲಿಕೆಯನ್ನು ಒತ್ತಾಯಿಸಿದ್ದಾರೆ.
ಇನ್ನೂ ಸಾಗರ ಸಮೀಪದ ಶಿರವಾಳ ಗ್ರಾಮದಲ್ಲಿ ವೃತ್ತಕ್ಕೆ ನಟ ಪುನೀತ್ ರಾಜಕುಮಾರ್ ಹೆಸರು ಇಡಲಾಗಿದೆ. ಕರ್ನಾಟಕ ರಾಜ್ಯೋತ್ಸವದಂದು ಸರ್ಕಲ್’ಗೆ ಪುನೀತ್ ರಾಜಕುಮಾರ್ ಅವರ ಹೆಸರು ನಾಮಕರಣ ಮಾಡಿ ಗೌರವ ಸಲ್ಲಿಸಲಾಯಿತು. ಗ್ರಾಮಸ್ಥರು ಪುನೀತ್ ರಾಜಕುಮಾರ್ ವೃತ್ತ ಎಂದು ನಾಮಕರಣ ಮಾಡಿ, ಬೋರ್ಡ್ ಹಾಕಿಸಿದ್ದಾರೆ.ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೇಣದ ಬತ್ತಿ ಬೆಳಗಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.