ಆನಂದಪುರಂನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಬಹು ವಿಜ್ರಂಭಣೆಯಿಂದ ನೆರವೇರಿತು ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ :

ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ 14 ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು.ಇಂದು, ಭಾರತದಾದ್ಯಂತ ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

ಭಾರತದಲ್ಲಿ ಮಕ್ಕಳ ದಿನಾಚರಣೆಯ ಆಚರಣೆಯು 1956 ರ ಹಿಂದಿನದು. ಪಂ. ಜವಾಹರಲಾಲ್ ನೆಹರು, ಭಾರತವು ಮಕ್ಕಳ ದಿನವನ್ನು ನವೆಂಬರ್ 20 ರಂದು ಆಚರಿಸಿತು. ಜವಾಹರಲಾಲ್ ನೆಹರೂ ಅವರ ನಿಧನದ ನಂತರ ಅವರ ಜನ್ಮ ದಿನಾಚರಣೆಯನ್ನು ಭಾರತದಲ್ಲಿ ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತದೆ. ಅವರು ಮಕ್ಕಳೊಂದಿಗೆ ಚಾಚಾ ನೆಹರು ಎಂದು ಬಹಳ ಜನಪ್ರಿಯರಾಗಿದ್ದರಿಂದ ಇದನ್ನು ಮಾಡಲಾಯಿತು, ಆದ್ದರಿಂದ, ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರೂ ಅವರಿಗೆ ವಿದಾಯ ಹೇಳಲು ಸಂಸತ್ತಿನಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದು ಶಿಕ್ಷಕರು ಗಣಪತಿ ಕೆ ಮಕ್ಕಳೊಂದಿಗೆ ಅನಿಸಿಕೆ ಹಂಚಿಕೊಂಡರು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಧನ್ಯ  ಆರ್ ಹತ್ತನೇ ತರಗತಿ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ದೀಪಿಕಾ,ಸುದೀಪ್,ದೀಕ್ಷೀತಾ,
ಪ್ರತೀಕ್ಷಾ,ಯಶವಂತ, ತರುಣ್,ಪುಷ್ಫ,ಸ್ವಾತಿ ಶಣೈ,ತನುಶ್ರೀ,ನಿಖಿತ,ಹರ್ಷಿತ,ಶ್ರವ್ಯ,ಸ್ರಜನ್,
ಕೌಶಿಕ್ ಭಾಗವಹಿಸಿದ್ದರು.

ನಂತರ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಉಪಪ್ರಾಚಾರ್ಯರಾದ ಪುಷ್ಪಾ ಬಡ್ತಿ ಮುಖ್ಯ ಶಿಕ್ಷಕರಾದ ಟೀಕಪ್ಪ  ಹಾಗೂ ಕೆ ಪಿ ಎಸ್ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು  ಉಪಸ್ಥಿತರಿದ್ದರು.

ವರದಿ : ಪವನ್ ಕುಮಾರ್ ಕಠಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

5 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

8 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

8 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

8 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

9 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago