Headlines

ಉಪಚುನಾವಣೆ : ಸಿಂಧಗಿಯಲ್ಲಿ ಬಿಜೆಪಿ ಗೆಲುವಿನ ಕೇಕೆ : ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ : ಜೆಡಿಎಸ್ ಗೆ ತೀವ್ರ ಹಿನ್ನಡೆ

ಸಿಂಧಗಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ ಭೂಸನೂರ 93,865  ಮತ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ನ ಅಶೋಕ ಮಲ್ಲಪ್ಪ ಮನಗೂಳಿ 62,680 ಪಡೆದುಕೊಂಡಿದ್ದಾರೆ. ಮತ್ತು ಜೆಡಿಎಸ್ ನಾಝಿಯಾ ಶಕೀಲ್ ಅಂಗಡಿ ಕೇವಲ 4,353  ಪಡೆದುಕೊಂಡಿದ್ದಾರೆ.

ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಬಂದಿದ್ದರು.

ಹಾನಗಲ್ ನಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಮುಖ್ಯಮಂತ್ರಿ ಬೊಮ್ಮಾಯಿಗೆ ತೀವ್ರ ಮುಖಭಂಗ


ಹಾನಗಲ್: ಮುಖ್ಯಮಂತ್ರಿ ತವರು ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್  ಅಭ್ಯರ್ಥಿ ಶ್ರೀನಿವಾಸ ಮಾನೆ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಈ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ತೀವ್ರ ಮುಖಭಂಗವಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು  55665 ಹಾಗೂ ಬಿಜೆಪಿಯ ಶಿವರಾಜ ಸಜ್ಜನರ ಅವರು 48847 ಮತ್ತು ಜೆಡಿಎಸ್ ನ  ನಿಯಾಜ್ ಶೇಖ್ ಕೇವಲ 570 ಮತಗಳನ್ನು ಪಡೆದಿದ್ದಾರೆ.

ಇನ್ನು ಸಿಂದಗಿ ಹಾಗೂ ಹಾನಗಲ್​ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್​ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದರು.  

Leave a Reply

Your email address will not be published. Required fields are marked *