ಎಂಎಲ್ಸಿ ಚುನಾವಣೆ :: ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು.

ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆಗೆ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ನೋಡಲ್ ಅಧಿಕಾರಿಗಳು ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದು ಅವರು ಹೇಳಿದರು.

ಮತದಾರರ ವಿವರ :

ಲೋಕಸಭಾ, ರಾಜ್ಯಸಭಾ, ವಿಧಾನಸಭಾ, ವಿಧಾನ ಪರಿಷತ್, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾನದ ಹಕ್ಕು ಹೊಂದಿರುತ್ತಾರೆ. ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯವನ್ನು ನಿಗದಿತ ನಮೂನೆಯಲ್ಲಿ ಕೈಗೊಂಡು ಅರ್ಹ ಮತದಾರರ ವಿವರಗಳನ್ನು ತಕ್ಷಣ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ 7 ತಾಲೂಕು ಹಾಗೂ ದಾವಣಗೆರೆ ಜಿಲ್ಲೆಯ 3 ತಾಲೂಕುಗಳು ಪ್ರಸ್ತುತ ಚುನಾವಣೆಯ ವ್ಯಾಪ್ತಿಯಲ್ಲಿದ್ದು, ಒಟ್ಟು 4129 ಮತದಾರರು ಇದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ 23 ಪುರಸಭೆ ಸದಸ್ಯರು ಹಾಗೂ 732 ಗ್ರಾಮ ಪಂಚಾಯತ್ ಸದಸ್ಯರು, ಹೊನ್ನಾಳಿ ತಾಲೂಕಿನ 18 ಪುರಸಭೆ ಹಾಗೂ 323 ಗ್ರಾ.ಪಂ ಸದಸ್ಯರು, ನ್ಯಾಮತಿ ತಾಲೂಕಿನ 190 ಗ್ರಾ.ಪಂ ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ. ಈ ಮೂರು ತಾಲೂಕುಗಳಲ್ಲಿ ಒಟ್ಟು 41 ಪುರಸಭೆ ಸದಸ್ಯರು ಹಾಗೂ 1245 ಗ್ರಾ.ಪಂ ಸದಸ್ಯರು ಸೇರಿದಂತೆ 1286 ಮತದಾರರು ಇದ್ದಾರೆ.

ಶಿವಮೊಗ್ಗ ತಾಲೂಕಿನಲ್ಲಿ ಮಹಾನಗರ ಪಾಲಿಕೆಯ 35 ಸದಸ್ಯರು ಹಾಗೂ 456 ಗ್ರಾ.ಪಂ ಸದಸ್ಯರು, ಭದ್ರಾವತಿ ತಾಲೂಕಿನ ನಗರಸಭೆಯ 35 ಸದಸ್ಯರು, 441 ಗ್ರಾ.ಪಂ ಸದಸ್ಯರು, ಸಾಗರ ತಾಲೂಕಿನ 31 ನಗರ ಸಭೆ ಸದಸ್ಯರು, 11 ಪಟ್ಟಣ ಪಂಚಾಯತ್ ಸದಸ್ಯರು, 368 ಗ್ರಾ.ಪಂ ಸದಸ್ಯರು, ಶಿಕಾರಿಪುರ ತಾಲೂಕಿನ 23 ಪುರಸಭೆ ಸದಸ್ಯರು, 17 ಪಟ್ಟಣ ಪಂಚಾಯತ್ ಸದಸ್ಯರು ಹಾಗೂ 453 ಗ್ರಾ.ಪಂ ಸದಸ್ಯರು, ತೀರ್ಥಹಳ್ಳಿ ತಾಲೂಕಿನ 15 ಪಟ್ಟಣ ಪಂಚಾಯತ್ ಸದಸ್ಯರು ಮತ್ತು 336 ಗ್ರಾಮ ಪಂಚಾಯತ್ ಸದಸ್ಯರು, ಸೊರಬ ತಾಲೂಕಿನ 12 ಪ.ಪಂ ಸದಸ್ಯರು ಮತ್ತು 304 ಗ್ರಾ.ಪಂ ಸದಸ್ಯರು ಹಾಗೂ ಹೊಸನಗರ ತಾಲೂಕಿನ 11 ಪ.ಪಂ ಸದಸ್ಯರು ಹಾಗೂ 295 ಗ್ರಾ.ಪಂ ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 2653 ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ 2843 ಮತದಾರರು ಇದ್ದಾರೆ.

ಒಟ್ಟಾರೆಯಾಗಿ ಚುನಾವಣೆಯಲ್ಲಿ ಗ್ರಾಮ ಪಂಚಾಯತ್‍ನ 3898 ಸದಸ್ಯರು ಸೇರಿದಂತೆ 4129 ಮತದಾರರು ಮತದಾನದ ಅವಕಾಶ ಹೊಂದಿದ್ದಾರೆ.

ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಶಿವಮೊಗ್ಗ ಉಪವಿಭಾಗಾಧಿಕಾರಿ ಜಿ.ಪ್ರಕಾಶ್, ಸಾಗರ ಉಪವಿಭಾಗಾಧಿಕಾರಿ ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

7 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

9 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

10 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

10 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

11 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago