Categories: Blog

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು.

ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ.

ಇಂದಿನ ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕತೆ ಇದೆ. ಈ ಹಿನ್ನೆಲೆ ನಾವಿಂದು ಕನಕದಾಸರ ಜೀವನ ಸಾರ ಹೇಳುವ ಹೇಳಿಕೆಗಳ ಮೂಲಕ ಕನಕ ಜಯಂತಿ ಶುಭಾಶಯಗಳನ್ನು ಹೇಳಲಿದ್ದೇವೆ. ವಾಟ್ಸಾಪ್‌, ಪೇಸ್‌ಬುಕ್‌ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂಥ ಆದರ್ಶಪೂರ್ಣ ಹೇಳಿಕೆಗಳು ಇಲ್ಲಿವೆ:

ನೀ ಮಾಯೆಯೊಳಗೋ

1. ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ
ನೀ ದೇಹದೊಳಗೋ ನಿನ್ನೊಳು ದೇಹವೋ
ಕಾಗಿನೆಲೆಯಾದಿಕೇಶವ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ
ಕನಕದಾಸ ಜಯಂತಿಯ ಶುಭಾಶಯಗಳು


ಅದುವೇ ಮಡಿ

2. ಬಟ್ಟೆ ನೀರೊಳಗೆ ಅದ್ದಿ ಒಣಗಿಸಿ
ಉಟ್ಟುಕೊಂಡರೆ ಅದು ಮಡಿಯಲ್ಲ
ಹೊಟ್ಟೆಯೊಳಗಿನ ಕಾಮ, ಕ್ರೋಧಾದಿಗಳನು
ಬಿಟ್ಟು ನಡೆದರೆ ಅದು ಮಡಿ
ಕನಕದಾಸ ಜಯಂತಿಯ ಶುಭಾಶಯಗಳು


ಪರಸತಿಯ ನೋಡದಿರು

3. ಪರಸತಿಯ ನೋಡದಿರು, ದುರ್ಜನರ ಕೂಡದಿರು
ಗರ್ವದ ಮಾತುಗಳನ್ನು ಆಡದಿರು
ಕೈಯಹಿಂದೆಗೆವ ಹೇಡಿಯನ್ನು ಬೇಡದಿರು
ಬೀದಿಗೂಳುಂಬ ದೈವಗಳನ್ನು ಕೊಂಡಾಡದಿರು
ಕನಕದಾಸ ಜಯಂತಿಯ ಶುಭಾಶಯಗಳು

ಕುಲದ ನೆಲೆಯನ್ನು ಬಲ್ಲಿರಾ?

4. ಕುಲ, ಕುಲ ಎಂದು ಹೊಡೆದಾಡದಿರಿ ಹುಚ್ಚಪ್ಪಗಳಿರಾ
ನಿಮ್ಮ ಕುಲದ ನೆಲೆಯನ್ನು ಬಲ್ಲಿರಾ?
ಆತ್ಮ, ಜೀವ, ಗಾಳಿ, ನೀರು, ಅನ್ನ ಯಾವ ಕುಲ?
ಕನಕದಾಸ ಜಯಂತಿಯ ಶುಭಾಶಯಗಳು



ಧಾನ್ಯವ ನೋಡಿ ಬಿತ್ತಿರಯ್ಯ

5. ತನುವ ನೇಗಿಲ ಮಾಡಿ ಹೃದಯ ಹೊಲವನು ಮಾಡಿ
ತನ್ವಿರಾ ಎಂಬ ಎರಡೆತ್ತ ಹೂಡಿ
ಜ್ಞಾನವೆಂಬೋ ಮಿಣೆಯ ಕಟ್ಟು ಹಗ್ಗವ ಮಾಡಿ
ಧ್ಯಾನವೆಂಬ ಧಾನ್ಯವ ನೋಡಿ ಬಿತ್ತಿರಯ್ಯ
ಕನಕದಾಸ ಜಯಂತಿಯ ಶುಭಾಶಯಗಳು


ಸದಾಶಿವನ ದಾಸನಾಗಬೇಕು

6. ಮೋಕ್ಷ ಸಿಗಬೇಕೆಂದರೆ ನಾನು ಎಂಬಾಸೆ ಬಿಟ್ಟು ದಾಸನಾಗಬೇಕು, ಸದಾಶಿವನ ದಾಸನಾಗಬೇಕು
ಕನಕದಾಸ ಜಯಂತಿಯ ಶುಭಾಶಯಗಳು


ಜ್ಞಾನ ಭಕ್ತಿ ಅದುವೇ ದೊಡ್ಡದು

7. ಹಿಂದೆ ನನ್ನ ಬೈದವರೆಲ್ಲ ಚಂದಾಗಿರಲಿ
ಮುಂದೆ ಎನ್ನ ಬಯ್ಯುವರೆಲ್ಲ್ ಅಂದಣ ಏರಲಿ
ಏನು ವಲ್ಲೆ ಹರಿಯೇ ನಿನ್ನ ಸ್ತುತಿಸಿ ಕೇಳುವುದು
ಜ್ಞಾನ ಭಕ್ತಿ ಕೊಡು ನನಗೆ ಅದುವೇ ದೊಡ್ಡದು
ಕನಕದಾಸ ಜಯಂತಿಯ ಶುಭಾಶಯಗಳು


ಸುಜ್ಞಾನಿ

ಅಜ್ಞಾನಿಗಳೊಡನೆ ಅಧಿಕ ಸ್ನೇಹಕ್ಕಿಂತ
ಸುಜ್ಞಾನಿಗಳೊಡನೆ ಜಗಳವಾಡುವುದೇ ಲೇಸು
ಕನಕದಾಸ ಜಯಂತಿಯ ಶುಭಾಶಯಗಳು


ನೆಂಟರ ಬಾಗಿಲ ಸೇರಬಾರದು

ಅಡಿ ಸತ್ತ ಮಡಿಕೆಯನು ಜೋಡಿಸಿ ಒಲೆಗುಂಡು ಹೂಡಬಾರದು
ಬಡತನ ಬಂದಾಗ ನೆಂಟರ ಬಾಗಿಲ ಸೇರಬಾರದು
ಕನಕದಾಸ ಜಯಂತಿಯ ಶುಭಾಶಯಗಳು


ಎಲ್ಲವೂ ನಿಷ್ಫಲ

ಮನದಲ್ಲಿ ಕಪಟವಿಟ್ಟುಕೊಂಡು ಎಷ್ಟು ಜಪ ಮಾಡಿದರೇನು ಫಲ? ವೇದ ಶಾಸ್ತ್ರಗಳನ್ನೋದಿ ಬಾಯಾರಿದರೆ ಏನು ಫಲ?
ಹೊಳೆಯೊಳಗೆ ಮುಳುಗಿ ತಪ ಮಾಡಿದರೇನು ಫಲ? ಮನದಲ್ಲಿ ಕಪಟವಿರುವಾಗ ಎಲ್ಲವೂ ನಿಷ್ಫಲ



ಎಲ್ಲಾ ಓದುಗರಿಗೆ ಕನಕದಾಸ ಜಯಂತಿಯ ಶುಭಾಶಯಗಳು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago