ಕಸಾಪ ಜಿಲ್ಲಾಧ್ಯಕ್ಷರಾಗಿ ಡಿ ಮಂಜುನಾಥ್ ಆಯ್ಕೆ ಹಿನ್ನಲೆ ರಿಪ್ಪನ್ ಪೇಟೆ ಸಾಹಿತ್ಯಾಭಿಮಾನಿಗಳಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ : ಸಾಹಿತ್ಯ ಪೋಷಕರಾದ ಹಿರಿಯ ಪತ್ರಕರ್ತ ಹಾಗೂ ಹಿರಿಯ ಸಾಹಿತಿಗೆ ಸನ್ಮಾನ

ರಿಪ್ಪನ್ ಪೇಟೆ :  ಭಾನುವಾರ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಡಿ ಮಂಜುನಾಥ್ ಅವರು ಆಯ್ಕೆಯಾಗಿರುವುದಕ್ಕೆ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕನ್ನಡ ಸಾಹಿತ್ಯ ಅಭಿಮಾನಿಗಳು ಪಟಾಕಿ ಸಿಡಿಸುವುದರ ಮೂಲಕ ಸಂಭ್ರಮ ಆಚರಿಸಿದರು

ಕನ್ನಡ ನಾಡು-ನುಡಿಗೆ ಅನೇಕ ವಿನೂತನ ಕಾರ್ಯಕ್ರಮವನ್ನು ಅಧಿಕಾರವಿಲ್ಲದೆ  ಡಿ ಮಂಜುನಾಥ್ ಅವರ ಸೇವೆ ಹಾಗೂ ಕಾರ್ಯ ಶ್ಲಾಘನೀಯ ಹಾಗೇಯೆ ಅವರು ಜಿಲ್ಲಾ ಕಸಪಾ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಪಟ್ಟಣದ ಸಾಹಿತ್ಯ ಅಭಿಮಾನಿಗಳು ಸಂತೋಷವನ್ನು ವ್ಯಕ್ತಪಡಿಸಿ ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು.
ಈ ವಿಜಯೋತ್ಸವ ಸಂದರ್ಭದಲ್ಲಿ ಹೊಸನಗರ ತಾಲೂಕಿನ ಸಾಹಿತ್ಯ ಕ್ಷೇತ್ರದ ಪೋಷಕರಾದ ಹಿರಿಯ ಪತ್ರಕರ್ತರಾದ ತ.ಮ ನರಸಿಂಹ ಹಾಗೂ ಹಿರಿಯ ಸಾಹಿತಿ ಮಂಜುನಾಥ್ ಕಾಮತ್ ರವರಿಗೆ ಸಾಹಿತ್ಯಾಭಿಮಾನಿಗಳು ವಿನಾಯಕ  ಸರ್ಕಲ್ ನಲ್ಲಿ ಸನ್ಮಾನಿಸಿ ಗೌರವ ಸೂಚಿಸಿದರು.

ಈ ಸಂಧರ್ಭದಲ್ಲಿ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾದ ಆರ್ ಎ ಚಾಬು ಸಾಬ್,ಸಾಹಿತ್ಯಾಭಿಮಾನಿಗಳಾದ ಆರ್ ಎನ್.ಮಂಜುನಾಥ್,ಅಮೀರ್ ಹಂಜಾ,ಎಂ ಎಂ . ಪರಮೇಶ್, ಆಸಿಫ಼್ ಭಾಷಾಸಾಬ್. ಪ್ರಕಾಶ್ ಪಾಲೇಕರ್, ಜಿ. ಆರ್ ಗೋಪಾಲಕೃಷ್ಣ, ಮಂಜ ನಾಯಕ್, ಆರ್ ಎಸ್ ಶಂಶುದ್ದೀನ್  ಶ್ರೀಧರ್ ,ಫ್ಯಾನ್ಸಿ ರಮೇಶ್,ಸುಗಂಧರಾಜ್,ಉಲ್ಲಾಸ್,ಪ್ರವೀಣ್ ಸುಳುಕೋಡು,ಪ್ರಕಾಶ್ ಪಾಲೇಕರ್ ಹಾಗೂ ಇನ್ನೂ ಮುಂತಾದವರು ಹಾಜರಿದ್ದರು.






ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 hour ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

23 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago