ಕಾರು ಡಿಕ್ಕಿಯಾಗಿ ಬಾಲಕ ಸಾವು :ನಡು ರಸ್ತೆಯಲ್ಲೆ ಶವವಿಟ್ಟು ಪ್ರತಿಭಟನೆ ಮಾಡಿದ ಗ್ರಾಮಸ್ಥರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಹೆಚ್ಚುತ್ತಿದ್ದು ವಾಹನ ವೇಗ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕುಂಸಿ ಗ್ರಾಮಸ್ಥರು ಗುರುವಾರ ಅಪಘಾತದಿಂದ ಮೃತಪಟ್ಟ ಬಾಲಕನ ಶವವಿಟ್ಟು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ಸಾಗರ ಕಡೆಯಿಂದ ಬರುತ್ತಿದ್ದ ಕಾರು ಶಾಲೆಯಿಂದ ವಾಪಸು ಮನೆಗೆ ಬರುತ್ತಿದ್ದ ಕುಂಸಿ ಗ್ರಾಮದ ಚಿಕ್ಕಣ್ಣ ದಂಪತಿಗಳ ಪುತ್ರ 9 ವರ್ಷದ ಬಾಲಕ ವೇಣುಗೋಪಾಲ್‌ಗೆ ಡಿಕ್ಕಿ ಹೊಡೆದಿತ್ತು.

ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ನಂತರ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಹಾಗೂ ಕಬ್ಬಿನ ಗಾಣಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಿಂದ ಬಾಲಕನಿಗೆ ತೀವ್ರ ಗಾಯವಾಗಿ ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆತ ಗುರುವಾರ ಮೃತಪಟ್ಟಿದ್ದನು.

ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತವಾಗುತ್ತಿದೆ.ವೇಗ ನಿಯಂತ್ರಕ ಸೇರಿ ಇನ್ನಿತರ ಸುರಕ್ಷತಾ ಕ್ರಮ ಅಳವಡಿಸದೇ ಇರುವ ಕಾರಣ ವಾಹನಗಳು ವೇಗವಾಗಿ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದು ಅಪಘಾತಗಳು ಹೆಚ್ಚುತ್ತಿವೆ. ಕಳೆದ 7 ವರ್ಷದಲ್ಲಿ ಅಪಘಾತದಿಂದ 20ಕ್ಕೂ ಹೆಚ್ಚಿನ ಜನ ಅಮಾಯಕರು ಸಾವನ್ನಪ್ಪಿದ್ದಾರೆ. ಹೀಗಾಗಿ ಅಪಘಾತ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದರು. ಅಲ್ಲದೆ ಗುರುವಾರ ಮೃತ ಬಾಲಕ ವೇಣುಗೋಪಾಲ್ ಶವವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದರು.

ವಿಷಯ ತಿಳಿಯುತಿದ್ದಂತೆ ಪ್ರತಿಭಟನಾ ಸ್ಥಳಕ್ಕಾಗಮಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

4 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

4 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

4 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

11 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

15 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

15 hours ago