ಸಾಗರ : ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಕಾಲೇಜಿನ ಎದುರು ಭಾಗದಲ್ಲಿ ಪ್ರತಿಭಟನೆ ನಡೆಸಿದ
ವಿದ್ಯಾರ್ಥಿಗಳು ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ ನೀಡುವಂತೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಾಲೇಜು ವೇಳಾಪಟ್ಟಿ ಬದಲಾವಣೆ ಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ ನಡೆಸಿ ನಂತರ ತಿರ್ಮಾನ ಕೈಗೊಳ್ಳಬೇಕಿತ್ತು. ಈಗಿರುವ ವೇಳಾಪಟ್ಟಿಯಿಂದ ಹಲವಾರು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಅನಾನುಕೂಲ ಆಗುತ್ತಿದೆ ಆದ್ದರಿಂದ ಕೊಡಲೇ ಶಾಸಕ ಹರತಾಳು ಹಾಲಪ್ಪ ಮದ್ಯ ಪ್ರವೇಶ ಮಾಡಿ ವೇಳಾಪಟ್ಟಿ ಬದಲಾವಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ವಿದ್ಯಾರ್ಥಿ ಪ್ರಮುಖರಾದ. ಪ್ರಶಾಂತ್. ಪ್ರದೀಪ್. ಹರೀಶ್. ಅಮೋಘ ಮತ್ತಿತರರು ಹಾಜರಿದ್ದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ವೇಳಾಪಟ್ಟಿಯನ್ನು ರದ್ದುಪಡಿಸುವಂತೆ ವಿದ್ಯಾರ್ಥಿ ಒಕ್ಕೂಟದ ಸಿ ಎಂ ಚಿನ್ಮಯ್ ಆಗ್ರಹ
ಕಾಲೇಜು ವೇಳಾಪಟ್ಟಿಯ ಬದಲಾವಣೆಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ ನಡೆಸಿ ನಂತರ ತಿರ್ಮಾನ ಕೈಗೊಳ್ಳಬೇಕಿತ್ತು. ಈಗಿರುವ ವೇಳಾಪಟ್ಟಿಯಿಂದ ಹಲವಾರು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಅನಾನುಕೂಲ ಆಗುತ್ತಿದೆ ಆದ್ದರಿಂದ ಕೊಡಲೇ ಶಾಸಕ ಹರತಾಳು ಹಾಲಪ್ಪ ಮದ್ಯ ಪ್ರವೇಶ ಮಾಡಿ ವೇಳಾಪಟ್ಟಿ ಬದಲಾವಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟಿಸಲಾಯಿತು.
ನಂತರದಲ್ಲಿ ಸಾಗರದ ಉಪವಿಭಾಗಿಯ ಅಧಿಕಾರಿಗಳು ಬಂದು ವಿದ್ಯಾರ್ಥಿಗಳಿಗೆ ಇನ್ನೂ 2 ತಿಂಗಳಲ್ಲಿ ಸಮಸ್ಯೆಯನ್ನು ಬಗೆಹರಿಸಿವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಸಿಎಂ ಚಿನ್ಮಯ್,ಅವಿ ಭಂಡಾರಿ,ಸಚಿನ್,ಸೈಯದ್, ಆದಿತ್ಯ, ವರುಣ್ ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತಿ ಇದ್ದರು.