ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಮಹಿಳೆ ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಸಂಬಂಧಿಕರನ್ನು ಬಿಡಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆ ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುವ ಇಂಟರ್‌ಸಿಟಿ ರೈಲಿನ ಒಳಗೆ ಪ್ರಯಾಣಿಕರೊಂದಿಗೆ ಹತ್ತಿದ್ದಾರೆ. ಬಳಿಕ ರೈಲು ಚಲಿಸಲು ಆರಂಭವಾಗುತ್ತಿದ್ದಂತೆ ಕೆಳಗೆ ಇಳಿಯಲು ಪ್ರಯತ್ನಿಸಿದ್ದು, ಈ ವೇಳೆ ಆಯತಪ್ಪಿ ರೈಲಿನಿಂದ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸ್ ಅಣ್ಣಪ್ಪ ಹಾಗೂ ಸಂತೋಷ್ ಮಹಿಳೆಯನ್ನು ರಕ್ಷಿಸಿದ್ದಾರೆ.
ರೈಲ್ವೆ ಪೊಲೀಸರ ಸಮಯ ಪ್ರಜ್ಞೆ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್