Headlines

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಶ್ರೀಕಾಂತ್ ಪುನರಾಯ್ಕೆ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಹುಟ್ಟಿಸಿದೆ : ಆರ್ ಎನ್ ಮಂಜುನಾಥ್

ಶಿವಮೊಗ್ಗ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್   ರವರು ಪುನರ್ ಆಯ್ಕೆಯಾಗಿರುವುದಕ್ಕೆ ಹೊಸನಗರ ತಾಲೂಕಿನ ಜೆಡಿಎಸ್ ಮುಖಂಡರಾದ ಆರ್ ಎನ್ ಮಂಜುನಾಥ್ ಹರ್ಷ ವ್ಯಕ್ತ ಪಡಿಸಿದ್ದಾರೆ.

 ಯುವಕರ ಕಣ್ಮಣಿ, ಬಡವರ ಬಂಧುವಾದ ಎಂ ಶ್ರೀಕಾಂತ್  ನಾಯಕರನ್ನು ಸೃಷ್ಟಿಮಾಡುವ ನಾಯಕತ್ವದ ಗುಣವನ್ನು ಹೊಂದಿರುವ ಉನ್ನತ ಹೃದಯವಂತ ವ್ಯಕ್ತಿ. ಜಿಲ್ಲೆಯ ಯುವಕರ ಪಾಲಿಗೆ ಅಣ್ಣನ ಸ್ಥಾನದಲ್ಲಿದ್ದು, ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಪುನರ್ ಆಯ್ಕೆಯಾಗಿರುವುದು ಅಭಿನಂದನೀಯ ಅವರಿಗೆ ಹೊಸನಗರ ಕಾರ್ಯಕರ್ತರ ಪರವಾಗಿ ಹಾರ್ದಿಕ ಅಭಿನಂದನೆಗಳು ಎಂದರು.
ಶ್ರೀಕಾಂತ್ ಹಿಂದಿನ ಬಾರಿ ಅಧ್ಯಕ್ಷರಾಗಿದ್ದಾಗ ಜಿಲ್ಲೆಯಲ್ಲಿ ಮೂವರು ಶಾಸಕರನ್ನು ಗೆಲ್ಲಿಸಿದ್ದರು ಮುಂದಿನ ವಿಧಾನಸಭೆಯಲ್ಲಿ ಇನ್ನೂ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವಲ್ಲಿ ಅವರ ಕಾರ್ಯತಂತ್ರಕ್ಕೆ ನಾವೆಲ್ಲಾ ಭಾಗಿಯಾಗಿದ್ದೇವೆ ಎಂದರು‌.

 ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ ಗ್ರಾಮ ವಾಸ್ತವ್ಯ ಪ್ರತಿಯೊಬ್ಬರಿಗೂ ಮಾದರಿ. ಅವರ ಸಮ್ಮಿಶ್ರ ಸರಕಾರದಲ್ಲಿ ಅವರು ನೀಡಿದ ಜನಪರ ಯೋಜನೆಗಳನ್ನು ಪ್ರಚಾರ ಮಾಡುವುದರ ಮೂಲಕ ಯುವಜನರನ್ನು ಪಕ್ಷದತ್ತ ಸೆಳೆಯುವುದರೊಂದಿಗೆ ಪಕ್ಷ ಸಂಘಟನೆ ಮಾಡಿ ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿಯವರನ್ನು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿಸುವುದೇ ನಮ್ಮ ಗುರಿ ಎಂದರು.

Leave a Reply

Your email address will not be published. Required fields are marked *