ಶಿವಮೊಗ್ಗ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್ ರವರು ಪುನರ್ ಆಯ್ಕೆಯಾಗಿರುವುದಕ್ಕೆ ಹೊಸನಗರ ತಾಲೂಕಿನ ಜೆಡಿಎಸ್ ಮುಖಂಡರಾದ ಆರ್ ಎನ್ ಮಂಜುನಾಥ್ ಹರ್ಷ ವ್ಯಕ್ತ ಪಡಿಸಿದ್ದಾರೆ.
ಯುವಕರ ಕಣ್ಮಣಿ, ಬಡವರ ಬಂಧುವಾದ ಎಂ ಶ್ರೀಕಾಂತ್ ನಾಯಕರನ್ನು ಸೃಷ್ಟಿಮಾಡುವ ನಾಯಕತ್ವದ ಗುಣವನ್ನು ಹೊಂದಿರುವ ಉನ್ನತ ಹೃದಯವಂತ ವ್ಯಕ್ತಿ. ಜಿಲ್ಲೆಯ ಯುವಕರ ಪಾಲಿಗೆ ಅಣ್ಣನ ಸ್ಥಾನದಲ್ಲಿದ್ದು, ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಪುನರ್ ಆಯ್ಕೆಯಾಗಿರುವುದು ಅಭಿನಂದನೀಯ ಅವರಿಗೆ ಹೊಸನಗರ ಕಾರ್ಯಕರ್ತರ ಪರವಾಗಿ ಹಾರ್ದಿಕ ಅಭಿನಂದನೆಗಳು ಎಂದರು.
ಶ್ರೀಕಾಂತ್ ಹಿಂದಿನ ಬಾರಿ ಅಧ್ಯಕ್ಷರಾಗಿದ್ದಾಗ ಜಿಲ್ಲೆಯಲ್ಲಿ ಮೂವರು ಶಾಸಕರನ್ನು ಗೆಲ್ಲಿಸಿದ್ದರು ಮುಂದಿನ ವಿಧಾನಸಭೆಯಲ್ಲಿ ಇನ್ನೂ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವಲ್ಲಿ ಅವರ ಕಾರ್ಯತಂತ್ರಕ್ಕೆ ನಾವೆಲ್ಲಾ ಭಾಗಿಯಾಗಿದ್ದೇವೆ ಎಂದರು.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ ಗ್ರಾಮ ವಾಸ್ತವ್ಯ ಪ್ರತಿಯೊಬ್ಬರಿಗೂ ಮಾದರಿ. ಅವರ ಸಮ್ಮಿಶ್ರ ಸರಕಾರದಲ್ಲಿ ಅವರು ನೀಡಿದ ಜನಪರ ಯೋಜನೆಗಳನ್ನು ಪ್ರಚಾರ ಮಾಡುವುದರ ಮೂಲಕ ಯುವಜನರನ್ನು ಪಕ್ಷದತ್ತ ಸೆಳೆಯುವುದರೊಂದಿಗೆ ಪಕ್ಷ ಸಂಘಟನೆ ಮಾಡಿ ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿಯವರನ್ನು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿಸುವುದೇ ನಮ್ಮ ಗುರಿ ಎಂದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್