ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು.
ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು ಮಾಹಿತಿ ಪಡೆದರು. ಅಲ್ಲದೆ ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣದ ಕುರಿತು ತಿಳಿದುಕೊಂಡರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಮಧ್ಯಾಹ್ನ ಶಿವಮೊಗ್ಗ ಜಿಲ್ಲೆಗೆ ಆಗಮಿಸಿದ್ದರು. ರಾತ್ರಿ ಜೋಗದ ಬಾಂಬೆ ಗೆಸ್ಟ್ ಹೌಸ್’ನಲ್ಲಿ ರಾಜ್ಯಪಾಲರು ತಂಗಿದ್ದರು. ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಪ್ರಮುಖರು ಸ್ವಾಗತ ಕೋರಿದರು. ಈ ಸಂದರ್ಭದಲ್ಲೂ ಜೋಗದ ವೈಭವದ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾಹಿತಿ ಪಡೆದಿದ್ದರು.
ಇನ್ನು, ಬೆಳಗ್ಗೆ ಜೋಗದ ವೈಭವ ಕಣ್ತುಂಬಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಅಧಿಕಾರಿಗಳ ಜೊತೆಗೆ ಫೋಟೊ ಸೆಷನ್ ನಡೆಸಿದರು. ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ರಕ್ಷಣಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಕುಮುಟ ಉಪ ವಿಭಾಗಾಧಿಕಾರಿ ರಾಹುಲ್ ಪಾಂಡೆ ಸೇರಿದಂತೆ ಹಲವರು ಇದ್ದರು. ಎಲ್ಲರೊಂದಿಗೂ ರಾಜ್ಯಪಾಲರು ಫೋಟೊ ಕ್ಲಿಕ್ಕಿಸಿಕೊಂಡರು.
ಬುಧವಾರ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ತೆರಳಿದ್ದರು. ಅಲ್ಲಿರುವ ಪ್ರಾಣಿ ಮತ್ತು ಪಕ್ಷಿಗಳನ್ನು ಕಣ್ತುಂಬಿಕೊಂಡರು. ಪ್ರತಿ ಪ್ರಾಣಿ ಮತ್ತು ಪಕ್ಷಿಯ ಬಳಿಗೆ ತೆರಳಿ ಸಿಂಹಧಾಮದ ಅಧಿಕಾರಿಗಳಿಂದ ಅದರ ಕುರಿತು ಮಾಹಿತಿ ಪಡೆದುಕೊಂಡರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್