w
Headlines
Home » ಡಿ ಕೆ ಶಿವಕುಮಾರ್ ಆಪ್ತ ಸಹಾಯಕ ಎಂದು 15 ಲಕ್ಷ ವಂಚಿಸಿದ ಭೂಪ !!

ಡಿ ಕೆ ಶಿವಕುಮಾರ್ ಆಪ್ತ ಸಹಾಯಕ ಎಂದು 15 ಲಕ್ಷ ವಂಚಿಸಿದ ಭೂಪ !!

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್‌ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್‌ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
2106ರಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕೆಂಚಪ್ಪ ಅವರಿಗೆ ಪರಿಚಯವಾಗಿದ್ದಾನೆ. ತಾನು ವಿಶ್ವಾಸ್ ಚಂದ್ರಶೇಖರ್ ಮತ್ತು ಜೊತೆಗಿದ್ದ ಮಹಿಳೆಯನ್ನು ಸಂಧ್ಯಾ ಎಂದು ಪರಿಚಿಯಿಸಿಕೊಂಡಿದ್ದಾರೆ.
“ನಾನು ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ. ಸರ್ಕಾರಿ ಕೆಲಸ ಕೊಡಿಸುತ್ತೇನೆ” ಎಂದು ನಂಬಿಸಿದ್ದಾನೆ. ವಿಶ್ವಾಸ್ ಚಂದ್ರಶೇಖರ್ ಮಾತು ನಂಬಿದ ಕೆಂಚಪ್ಪ ತಮ್ಮ ಪರಿಚಯದವರೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಲು ಹಣ ನೀಡಿದ್ದಾರೆ. ಸ್ವಲ್ಪ ಹಣವನ್ನು ನೇರವಾಗಿ ಕೊಟ್ಟಿದ್ದಾರೆ. ಉಳಿದ ಹಣವನ್ನು ಬ್ಯಾಂಕ್ ಮೂಲಕ ವರ್ಗಾಯಿಸಿದ್ದಾರೆ.
ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ ವಿಶ್ವಾಸ್ ಚಂದ್ರಶೇಖರ್ ಬಳಿಕ ಸರಿಯಾಗಿ ಸ್ಪಂದಿಸಿಲ್ಲ. ಹಣ ಹಿಂತಿರುಗಿಸುವಂತೆ ಕೆಂಚಪ್ಪ ಒತ್ತಡ ಹೇರಿದ್ದಾರೆ. ವಿಶ್ವಾಸ್ ಚಂದ್ರಶೇಖರ್‌ ಊರಿಗೆ ಹೋಗಿ ಹಣ ಕೇಳಿದಾಗ 1 ಲಕ್ಷ ರೂ. ನ ಚೆಕ್ ನೀಡಿದ್ದಾನೆ. ಆದರೆ ಆ ಚೆಕ್ ಬೌನ್ಸ್ ಆಗಿದೆ.
ಕೊನೆಗೆ ನಿವೃತ್ತ ಚಾಲಕ ಕೆಂಚಪ್ಪ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಚಿಕ್ಕಮಗಳೂರಿನ ವಿಶ್ವಾಸ್ ಚಂದ್ರಶೇಖರ್ ಮತ್ತು ಮೈಸೂರಿನ ಸಂಧ್ಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.