ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್‌ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್‌ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
2106ರಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕೆಂಚಪ್ಪ ಅವರಿಗೆ ಪರಿಚಯವಾಗಿದ್ದಾನೆ. ತಾನು ವಿಶ್ವಾಸ್ ಚಂದ್ರಶೇಖರ್ ಮತ್ತು ಜೊತೆಗಿದ್ದ ಮಹಿಳೆಯನ್ನು ಸಂಧ್ಯಾ ಎಂದು ಪರಿಚಿಯಿಸಿಕೊಂಡಿದ್ದಾರೆ.
“ನಾನು ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ. ಸರ್ಕಾರಿ ಕೆಲಸ ಕೊಡಿಸುತ್ತೇನೆ” ಎಂದು ನಂಬಿಸಿದ್ದಾನೆ. ವಿಶ್ವಾಸ್ ಚಂದ್ರಶೇಖರ್ ಮಾತು ನಂಬಿದ ಕೆಂಚಪ್ಪ ತಮ್ಮ ಪರಿಚಯದವರೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಲು ಹಣ ನೀಡಿದ್ದಾರೆ. ಸ್ವಲ್ಪ ಹಣವನ್ನು ನೇರವಾಗಿ ಕೊಟ್ಟಿದ್ದಾರೆ. ಉಳಿದ ಹಣವನ್ನು ಬ್ಯಾಂಕ್ ಮೂಲಕ ವರ್ಗಾಯಿಸಿದ್ದಾರೆ.
ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ ವಿಶ್ವಾಸ್ ಚಂದ್ರಶೇಖರ್ ಬಳಿಕ ಸರಿಯಾಗಿ ಸ್ಪಂದಿಸಿಲ್ಲ. ಹಣ ಹಿಂತಿರುಗಿಸುವಂತೆ ಕೆಂಚಪ್ಪ ಒತ್ತಡ ಹೇರಿದ್ದಾರೆ. ವಿಶ್ವಾಸ್ ಚಂದ್ರಶೇಖರ್ ಊರಿಗೆ ಹೋಗಿ ಹಣ ಕೇಳಿದಾಗ 1 ಲಕ್ಷ ರೂ. ನ ಚೆಕ್ ನೀಡಿದ್ದಾನೆ. ಆದರೆ ಆ ಚೆಕ್ ಬೌನ್ಸ್ ಆಗಿದೆ.
ಕೊನೆಗೆ ನಿವೃತ್ತ ಚಾಲಕ ಕೆಂಚಪ್ಪ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಚಿಕ್ಕಮಗಳೂರಿನ ವಿಶ್ವಾಸ್ ಚಂದ್ರಶೇಖರ್ ಮತ್ತು ಮೈಸೂರಿನ ಸಂಧ್ಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್