ತೀರ್ಥಹಳ್ಳಿ: ಮಲೆನಾಡ ಭಾಗದಲ್ಲಿ ದನಗಳ್ಳರ ಹಾವಳಿ ಮಿತಿ ಮೀರಿದ್ದು ಅದರಲ್ಲೂ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜೆಲ್ಲೆಯಲ್ಲಿ ದನ ಕಳ್ಳರ ಕೇಸ್ ದಾಖಲಾಗುತ್ತಲೇ ಇರುತ್ತಿದೆ.
ತೀರ್ಥಹಳ್ಳಿಯ ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ಕಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್ ಅಪ್ ವಾಹನವನ್ನು ಹತ್ತಿಸಿದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ತಾಲೂಕಿನ ಮೇಳಿಗೆಯಿಂದ ಅಪ್ ವಾಹನವನ್ನು ಫಾಲೋ ಮಾಡಿದ ಯುವಕರ ಮೇಲೆ ಬೆಜ್ಜವಳ್ಳಿಯಲ್ಲಿ ಪಿಕ್ ಅಪ್ ಹತ್ತಿಸಲಾಗಿದೆ.
ಕಿರಣ್(23), ಚರಣ್(24) ಎಂಬ ಯುವಕರ ಮೇಲೆ ಪಿಕ್ ಅಪ್ ವಾಹನ ಹತ್ತಿಸಿದ್ದು ಇಬ್ಬರು ಸಹ ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ತೀರ್ಥಹಳ್ಳಿ ಆಸ್ಪತ್ರೆಗೆ ಗೃಹಸಚಿವರ ಭೇಟಿ :
ವಿಷಯ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ಆಸ್ಪತ್ರೆಗೆ ಭೇಟಿ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ ಇಬ್ಬರು ಯುವಕರ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ದನ ಕಳ್ಳತನ ಮಾಡಿದ ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗೃಹ ಸಚಿವರು ಹೇಳಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್