ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಬಳಿ ಬೈಕ್ ಹಾಗೂ 407 ಟೆಂಪೋ ವಾಹನದ ನಡುವೆ ಮುಖಾಮುಖಿ ಅಪಘಾತ ವಾಗಿದ್ದು ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ತಂದೆ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.
ಒಂದೇ ಕುಟುಂಬದ ನಾಲ್ವರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಎದುರು ಭಾಗದಿಂದ ಬಂದ 407 ಟೆಂಪೋ ವಾಹನ ಡಿಕ್ಕಿ ಹೊಡೆದಿದ್ದು ರಾಮಚಂದ್ರ ವೀರಪ್ಪ ( 42) ಪುಟಾಣಿ ಮಕ್ಕಳಾದ ಶಶಾಂಕ್( 11) ಆದರ್ಶ( 5)ಸ್ಥಳದಲ್ಲೇ ಅಸುನೀಗಿದ್ದಾರೆ.
ಇನ್ನೂ ಪತ್ನಿ ಭಾಗ್ಯಮ್ಮನಿಗೂ ಕೂಡ ತೀವ್ರ ಪೆಟ್ಟಾಗಿದ್ದು ಅವರು ಚಿಂತಾಜನಕವಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ಬೀಗರ ಮನೆಗೆ ದೀಪಾವಳಿ ಸಂಭ್ರಮಕ್ಕೆ ಹೊರಟಿದ್ದವರಿಗೆ ಜವರಾಯನ ಅಟ್ಟಹಾಸ::
ರಾಮಚಂದ್ರನ ಬೀಗರ ಮನೆಯಾದ ಚಿಕ್ಕ ಜಂಬೂರಿನಲ್ಲಿ ಇಂದು ದೀಪಾವಳಿಯ ಹಬ್ಬ ಆಚರಣೆ ಇತ್ತು.ಹಬ್ಬದ ಆಚರಣೆ ಮಾಡಲು ಕುಟುಂಬ ಸಮೇತ ಹೊರಟ ಕುಟುಂಬದ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದು ಬಾರದ ಲೋಕಕ್ಕೆ ಕಳುಹಿಸಿದ್ದು ಮಾತ್ರ ದುಃಖಕರ ಸಂಗತಿ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್