ಸಾಗರ: ದ್ವಿಚಕ್ರ ವಾಹನವನ್ನು ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರೂ ಯುವತಿಯರಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದು ಅಪಘಾತವಾಗಿರುವ ಘಟನೆ ಸಾಗರದಲ್ಲಿ ಸಂಜೆ ನಡೆದಿದೆ.
ಸಾಗರ ನಗರ ಬಿಹೆಚ್ ರಸ್ತೆಯಲ್ಲಿ ಇರುವ ಸುಜುಕಿ ಶೋರೂಮ್ ಎದುರು ಶುಕ್ರವಾರ ಸಂಜೆ ಲಗೇಜ್ ಆಟೋ ಒಂದು ಅಚಾನಕ್ಕಾಗಿ ರಸ್ತೆಯ ಮಧ್ಯ ಬಂದ ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಸ್ಎನ್ ನಗರದ ನಾಲ್ಕನೇ ತಿರುವಿನ ವಾಸಿಗಳಾದ ಆಫ಼್ರೀನ್ ಹಾಗೂ ಶಮ್ರೀನ್ ಎಂಬ ಇಬ್ಬರು ಯುವತಿಯರಿಗೆ ಡಿಕ್ಕಿ ಹೊಡೆದು ಅಪಘಾತವಾಗಿರುವ ಘಟನೆ ನಡೆದಿದೆ.
ಅಪಘಾತಕ್ಕೀಡಾಗಿರುವ ಯುವತಿಯರು ಕಂಪ್ಯೂಟರ್ ಕ್ಲಾಸ್ ಮುಗಿಸಿಕೊಂಡು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.ಅಪಘಾತದಲ್ಲಿ ಶಮ್ರೀನ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮತ್ತೊಂದು ಯುವತಿ ಆಫ಼್ರೀನ್ ಪರಿಸ್ಥಿತಿ ಸ್ಥಿತಿಚಿಂತಾಜನಕವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು ಆದರೆ ತಲೆಗೆ ತೀವ್ರವಾದ ಪೆಟ್ಟಾಗಿರುವುದರಿಂದ ಮೆಗ್ಗಾನ್ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮ್ಯಾಕ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಸಂಜೆ ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸಾಗರ ಉಪ ಪೊಲೀಸ್ ಅಧೀಕ್ಷಕರಾದ ರೋಹನ್ ಜಗದೀಶ್ ರವರು ಅಪಘಾತಕ್ಕೀಡಾದ ಯುವತಿಯರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟು ಅಪಘಾತದ ಮಾಹಿತಿ ಪಡೆದುಕೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್