ಶಿವಮೊಗ್ಗ : ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ
ಗೃಹಸಚಿವರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಿನ್ನೆ ಟೀಕಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ನಾನು ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವನಲ್ಲ. ಇಡೀ ರಾಜ್ಯಕ್ಕೆ ನಾನು ಗೃಹ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಸ್ವಂತ ಕ್ಷೇತ್ರದಲ್ಲಿ ಕೆಲಸ ಮಾಡುವುದು ಕಿಮ್ಮನೆ ಅವರಿಗೆ ಇಷ್ಟ ಇಲ್ಲದಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಿಮ್ಮನೆ ಮತ್ತು ಮಂಜುನಾಥ ಗೌಡರು ನಿರಂತರ ಪಾದಾಯಾತ್ರೆ ಮಾಡುತ್ತಾರೆ.
ಅವರು ಪಾದ ಯಾತ್ರೆ ಮಾಡುವುದನ್ನು ಬಿಡುತ್ತಾರೆಯೇ ಎಂದು ಪ್ರಶ್ನಿಸಿದ ಸಚಿವರು ಕ್ಷೇತ್ರದಲ್ಲಿ ಕೆಲಸ ಮಾಡುವುದು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಅನಿಸುತ್ತೆ ಎಂದು ಅನುಮಾನ
ವ್ಯಕ್ತಪಡಿಸಿದರು.
ಇನ್ನು ಬಿಟ್ ಕಾಯಿನ್ ಕುರಿತು ಕಾಂಗ್ರೆಸ್ ಈಗ ಸೈಲೆಂಟ್ ಆಗಿದೆ ಈಗಾಗಲೇ ಈ ಪ್ರಕರಣದ ಕುರಿತು ಅಗತ್ಯ ಕ್ರಮ ವಹಿಸಿದ್ದೇವೆ. ಯಾರೇ ಪ್ರಭಾವಿಗಳಿದ್ದರೂ ಅವರ ವಿರುದ್ದ ಕ್ರಮ
ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಜನ ಸ್ವರಾಜ್ ಸಮಾವೇಶಕ್ಕೆ ಕಾಂಗ್ರೆಸ್ ಟೀಕೆ ಮಾಡುತ್ತಿದೆ. ಮಳೆಯಿಂದ ರಾಜ್ಯದ ವಿವಿಧ
ಜಿಲ್ಲೆಯಲ್ಲಿ ಹಾನಿ ಆಗಿದೆ. ನಾನು ಕೂಡಾ ಮಳೆ ಹಾನಿಯ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಸಿಎಂ ಕೂಡಾ ಈಗಾಗಲೇ ಭೇಟಿ ನೀಡಿದ್ದಾರೆ. ಮಳೆ ಅವಾಂತರದಿಂದ ದೊಡ್ಡ ಪ್ರಮಾಣದಲ್ಲಿ ಬೆಳೆ ಹಾನಿ ಆಗಿದೆ. ಅನೇಕ
ಭಾಗದಲ್ಲಿ ಮನೆಗಳು ಕುಸಿದು ಬಿದ್ದಿವೆ. ಶೀಘ್ರದಲ್ಲೇ ಸಂತ್ರಸ್ತರಿಗೆ ಪರಿಹಾರ ಕ್ಕೆ ಕ್ರಮ ವಹಿಸಲಾಗಿದೆ ಎಂದರು.