ಬಹುಮುಖ ಪ್ರತಿಭೆ ಯುವ ಸಾಹಿತಿ ರಫಿ ರಿಪ್ಪನಪೇಟೆಯವರಿಗೆ ಹಾಲಿ ಹಾಗೂ ಮಾಜಿ ಶಾಸಕರ ನಡುವೆ ಅದ್ದೂರಿ ಸನ್ಮಾನ!! ಬಲು ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಯ್ತು ರಿಪ್ಪನ್ ಪೇಟೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ!!

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ.

ಅದರಂತೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯುವಸಾಹಿತಿ ಪತ್ರಕರ್ತ ರಫಿ ರಿಪ್ಪನಪೇಟೆ ಇದೀಗ ಎಲ್ಲರಿಗೂ ಕೂಡ ಚಿರಪರಿಚಿತ ಇವರ ಸಾಧನೆಗೆ,ಬರಹಕ್ಕೆ, ಸಾಹಿತ್ಯಕ್ಕೆ ಮೆಚ್ಚುಗೆ ಪಡೆದೆ ಇರುವವರು ಯಾರು ಕೂಡ ಇಲ್ಲ.

ಮೊನ್ನೆ ಮೊನ್ನೆಯಷ್ಟೇ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಯುವ ಸಾಹಿತಿಯಾದ ರಫಿ ರಿಪ್ಪನ್ ಪೇಟೆ ಯವರನ್ನು  ಸನ್ಮಾನಿಸಿ ಗೌರವಿಸಲಾಗಿತ್ತು.

ಇದೀಗ ರಿಪ್ಪನ್ ಪೇಟೆಯ ಕಸ್ತೂರಿ ಕನ್ನಡ ಸಂಘ ಎಲೆ ಮರೆ ಕಾಯಿಯಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ  ಸನ್ಮಾನಿತರನ್ನು ಗೌರವಿಸಿತ್ತು.ಅದರಲ್ಲಿ ರಫಿ ರಿಪ್ಪನ್ ಪೇಟೆರವರು ಕೂಡ ಒಬ್ಬರಾಗಿದ್ದರು.

ವಿಭಿನ್ನ ಸನ್ನಿವೇಶಕ್ಕೆ ಸಾಕ್ಷಿಯಾದ ರಫಿ ರಿಪ್ಪನ್ ಪೇಟೆ ರವರ ಸನ್ಮಾನ:

ರಾಜಕೀಯ ವಲಯದಲ್ಲಿ ಹಾಲಿ ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಬದ್ಧ ವೈರಿಗಳು ಇವರಿಬ್ಬರು ಒಂದೇ ವೇದಿಕೆಯಲ್ಲಿ ಬಹಳ ವರ್ಷಗಳ ನಂತರ ಕಂಡಿದ್ದು ಇದೇ ಮೊದಲು ಇಂತಹ ವಿಭಿನ್ನ ಸನ್ನಿವೇಶದ ವೇದಿಕೆಯಲ್ಲಿ ಇವರಿಗೆ ಸನ್ಮಾನ ಮಾಡಿದ್ದು ನಿಜಕ್ಕೂ  ಅಲ್ಲಿದ್ದ ಅಭಿಮಾನಿ ಬಳಗಕ್ಕೆ ಹರ್ಷ ವೆನಿಸಿತು.

ಜೊತೆಗೆ ರಿಪ್ಪನ್ ಪೇಟೆ ಯುವಕ ಮಧುಸೂದನ್ ಬೆಂಗಳೂರಿನ ಜಿಕೆವಿಕೆಯಲ್ಲಿ ಅದ್ವಿತೀಯ ಸಾಧನೆ ಮಾಡಿ ಚಿನ್ನದ ಪದಕ ಗಳಿಸುತ್ತಿದ್ದ ಬಂಗಾರದ ಯುವಕನಿಗೂ ಕೂಡ ಇದೇ ವೇದಿಕೆಯಲ್ಲಿ ಸನ್ಮಾನ ಮಾಡಲಾಯಿತು.

ಒಟ್ಟಾರೆ ಮಲೆನಾಡು ಇಡೀ ದೇಶಕ್ಕೆ ಅದ್ವಿತೀಯ ಅಪ್ರತಿಮ ಸಾಧಕರನ್ನು ನೀಡಿದೆ ನಮ್ಮೂರಿನ ಹೆಮ್ಮೆಯ ಯುವಕರಿಗೆ  ಸಾವಿರಾರು ಜನರ ಸಮ್ಮುಖದಲ್ಲಿ ಸನ್ಮಾನಿಸಿದ್ದು ಮಾತ್ರ ನಿಜಕ್ಕೂ ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ.


ವರದಿ : ಪವನ್ ಕುಮಾರ್ ಕಠಾರೆ 📹📹
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago