ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ : ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆಗೆ ಸಕಲ ಸಿದ್ದತೆ :

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಸಹಸ್ರಾರು ವರುಷಗಳ ಇತಿಹಾಸ ಪ್ರಸಿದ್ದ ಶ್ರೀ ಜಗದ್ಗುರು ರಂಭಾಪುರಿ ಖಾಸಾ ಶಾಖಾ  ಶ್ರೀಮಾನ್ ಮಹಾಸಂಸ್ಥಾನ ಮಳಿಲಿಮಠ ಕೋಣಂದೂರು ಇಲ್ಲಿ ದಿನಾಂಕ 18.11.2021 ರಂದು ಕಾರ್ತಿಕ ದೀಪೋತ್ಸವ ಹಾಗೂ ಜನಜಾಗೃತಿ ಧರ್ಮ ಸಮಾರಂಭವನ್ನು ಏರ್ಪಡಿಸಲಾಗಿದೆ.

ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀ ರಂಭಾಪುರಿ ಪೀಠ ಬಾಳೆಹೊನ್ನೂರು ಇವರು ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮದ್ ರಂಭಾಪುರಿ  ಶ್ರೀಮನ್ ಮಹಾಸಂಸ್ಥಾನ ಮಳಲಿ ಮಠದ ಶ್ರೀ .ಷ .ಬ್ರ .ಡಾ// ಗುರು ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಎಲ್ಲಾ ರಾಜಕೀಯ ಪಕ್ಷದ ಪ್ರಮುಖರು ಹಾಗೂ ಗಣ್ಯವ್ಯಕ್ತಿಗಳು ಹಾಜರಿರುವವರು. ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೀಪೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಶ್ರೀಮಠದ ಪ್ರಕಟಣೆ ತಿಳಿಸಿದೆ.

ಈ ಸಂದರ್ಭದಲ್ಲಿ ಕೋಣಂದೂರು ಉದ್ಯಮಿ ಕೆ.ಆರ್.ಪ್ರಕಾಶ್, ಎನ್.ವರ್ತೇಶ್ ರಿಪ್ಪನ್‌ ಪೇಟೆ, ಮೋಹನ್ ಜನನಿ, ಧರ್ಮರಾಜ್ ಸಮಟಗಾರು, ಹೆಚ್.ಎಸ್ ಸತೀಶ್ ಹಾರೋಹಿತ್ತಲು,ರಾಜೇಂದ್ರ ಘಂಟೆ,ಕಾರ್ತಿಕ್ ರಿಪ್ಪನ್ ಪೇಟೆ,ನಿರಂಜನ್ ರಿಪ್ಪನ್ ಪೇಟೆ ಹಾಗೂ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

19 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

20 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

20 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago