ಹೊಸನಗರ : ಮಾರುತಿಪುರದಲ್ಲಿ ಎಂಟನೇ ತರಗತಿ ಓದುತ್ತಿರುವ ಬಾಲಕ ಕೌಶಿಕ್ ಇದೇ ತಿಂಗಳ 4ರಂದು ಶಾಲೆಯಲ್ಲಿ ಆಡುತ್ತಿರುವಾಗ ಬಿದ್ದು ತಲೆಯ ಬಲಬಾಗದಲ್ಲಿ ಬಲವಾಗಿ ಪೆಟ್ಟಾಗಿದ್ದು ಬ್ರೈನ್ ನಲ್ಲಿ ಬ್ಲಾಡ್ ಕ್ಲೋಟ್ ಆಗಿರುವ ಕಾರಣ ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆ ಗೆ ಮ್ಯಾಕ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಸುಮಾರು 2 ಲಕ್ಷ ಕ್ಕೂ ಹೆಚ್ಚು ಚಿಕಿತ್ಸಾ ವೆಚ್ಚವಾಗುವದೆಂದು ಆರೋಗ್ಯ ಸಿಬ್ಬಂದಿಗಳು ತಿಳಿಸಿರುತ್ತಾರೆ.
ತಂದೆಯನ್ನು ಬಾಲ್ಯದಲ್ಲಿಯೇ ಕಳೆದುಕೊಂಡಿರುವ ಈ ಬಾಲಕ ತಾಯಿ ವಿಶಾಲ ಜೊತೆ ವಾಸಿಸುತ್ತಿದ್ದು ಯಾವದೇ ಆದಾಯವಿರುವದಿಲ್ಲ, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು ಇವರಿಗೆ ತುರ್ತಾಗಿ ಚಿಕೆತ್ಸೆಯ ಸಲುವಾಗಿ ಹಣದ ಅವಶ್ಯಕತೆ ಇರುವದರಿಂದ ದಾನಿಗಳ ಸಹಾಯದ ನಿರೀಕ್ಷೆಯಲ್ಲಿದೆ ಈ ಬಡ ಕುಟುಂಬ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರ್ ಗೆ ಸಂಪರ್ಕಿಸಿ
9844733213 (ಮಹೇಶ್ ಬಾಣಿಗ )
ಕಾರ್ತೀಕ್ ಗೌಡ 8105532551. ಇವರಿಗೆ ಸಂಪರ್ಕ ಮಾಡಿ ವಿಚಾರಿಸಿ. ನಿಮ್ಮ ಸಹಾಯ ಹಸ್ತಕ್ಕಾಗಿ ತಾಯಿ ಅಂಗಲಾಚಿ ಬೇಡುತ್ತಿದ್ದಾರೆ. ಮಗನನ್ನು ಉಳಿಸುವಲ್ಲಿ ನಿಮ್ಮೆಲ್ಲರ ಸಹಾಯ ನಿರೀಕ್ಷಿಸುತ್ತಿದ್ದಾರೆ ಈ ಬಡ ತಾಯಿ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್