ರಿಪ್ಪನ್ ಪೇಟೆಯಲ್ಲಿ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಪುನೀತ್ ರಾಜ್​ಕುಮಾರ್‌ಗೆ ಶ್ರದ್ಧಾಂಜಲಿ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ನೇರಲೆಮನೆ – ಕ್ವಾಡ್ರಿಗೆ ಗ್ರಾಮದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗ ಮತ್ತು ರೋಟರಿ ಕ್ಲಬ್ ರಿಪ್ಪನ್ ಪೇಟೆ ಸಂಯುಕ್ತ ಆಶ್ರಯದಲ್ಲಿ ಪುನೀತ್ ರಾಜ್​ಕುಮಾರ್​ ಪುಣ್ಯ ಸ್ಮರಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಗುರುವಾರ ಬೆಳಗ್ಗೆ ಆರಂಭವಾದ ರಕ್ತದಾನ ಶಿಬಿರದಲ್ಲಿ ಹತ್ತಾರು ಅಪ್ಪು ಅಭಿಮಾನಿಗಳು ರಕ್ತದಾನ ಮಾಡಿದರು. ಪುನೀತ್‌ ಅಗಲಿಕೆ ಹಿನ್ನೆಲೆ ಮೌನಾಚರಣೆ ಬಳಿಕ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್ ಸಾಮಾಜಿಕ ಕಾಳಜಿಯನ್ನ ಶ್ಲಾಘಿಸಲಾಯಿತು. ಮತ್ತು ಅಪ್ಪು ಶಿವಮೊಗ್ಗಕ್ಕೆ ಭೇಟಿ ಕೊಟ್ಟ ಕ್ಷಣಗಳನ್ನು ಮೆಲುಕು ಹಾಕಲಾಯಿತು.
ಈ ಸಂಧರ್ಭದಲ್ಲಿ ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಅಧ್ಯಕ್ಷರಾದ ನಾಗಭೂಷಣ್,ಗಣೇಶ್ ಕಾಮತ್,ಡಾಕಪ್ಪ ನೆರಲಮನೆ- ಕೊಡ್ರಿಗಿ ಗ್ರಾಮದಹಿರಿಯರಾದ ಶಿವಮೂರ್ತಿ,ಪುರುಶೋತ್ತಮ,ಯೋಗಪ್ಪ,ಬಾಲರಾಜ್,ಕೃಷ್ಣಮೂರ್ತಿ,ನಾಗರಾಜ್ ಅಮಗಲ್ ಹಾಗೂ ರಕ್ಷಿತ್,ಹಾಲೇಶ್,ಬಾಲಚಂದ್ರ,ವೆಂಕಟೇಶ ಹಾಗೂ ಊರಿನ ಯುವಕರೆಲ್ಲಾ ಭಾಗಿಯಾಗಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago