ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ನೇರಲೆಮನೆ – ಕ್ವಾಡ್ರಿಗೆ ಗ್ರಾಮದಲ್ಲಿ ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗ ಮತ್ತು ರೋಟರಿ ಕ್ಲಬ್ ರಿಪ್ಪನ್ ಪೇಟೆ ಸಂಯುಕ್ತ ಆಶ್ರಯದಲ್ಲಿ ಪುನೀತ್ ರಾಜ್ಕುಮಾರ್ ಪುಣ್ಯ ಸ್ಮರಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಗುರುವಾರ ಬೆಳಗ್ಗೆ ಆರಂಭವಾದ ರಕ್ತದಾನ ಶಿಬಿರದಲ್ಲಿ ಹತ್ತಾರು ಅಪ್ಪು ಅಭಿಮಾನಿಗಳು ರಕ್ತದಾನ ಮಾಡಿದರು. ಪುನೀತ್ ಅಗಲಿಕೆ ಹಿನ್ನೆಲೆ ಮೌನಾಚರಣೆ ಬಳಿಕ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪುನೀತ್ ರಾಜ್ಕುಮಾರ್ ಸಾಮಾಜಿಕ ಕಾಳಜಿಯನ್ನ ಶ್ಲಾಘಿಸಲಾಯಿತು. ಮತ್ತು ಅಪ್ಪು ಶಿವಮೊಗ್ಗಕ್ಕೆ ಭೇಟಿ ಕೊಟ್ಟ ಕ್ಷಣಗಳನ್ನು ಮೆಲುಕು ಹಾಕಲಾಯಿತು.
ಈ ಸಂಧರ್ಭದಲ್ಲಿ ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಅಧ್ಯಕ್ಷರಾದ ನಾಗಭೂಷಣ್,ಗಣೇಶ್ ಕಾಮತ್,ಡಾಕಪ್ಪ ನೆರಲಮನೆ- ಕೊಡ್ರಿಗಿ ಗ್ರಾಮದಹಿರಿಯರಾದ ಶಿವಮೂರ್ತಿ,ಪುರುಶೋತ್ತಮ,ಯೋಗಪ್ಪ,ಬಾಲರಾಜ್,ಕೃಷ್ಣಮೂರ್ತಿ,ನಾಗರಾಜ್ ಅಮಗಲ್ ಹಾಗೂ ರಕ್ಷಿತ್,ಹಾಲೇಶ್,ಬಾಲಚಂದ್ರ,ವೆಂಕಟೇಶ ಹಾಗೂಊರಿನ ಯುವಕರೆಲ್ಲಾ ಭಾಗಿಯಾಗಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್