ರಿಪ್ಪನ್ ಪೇಟೆ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್ಕುಮಾರ್ ನಗರ ಎಂದು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ವೃತ್ತಕ್ಕೆ ಪುನೀತ್ ರಾಜಕುಮಾರ್ ನಗರ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ.
ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್ಕುಮಾರ್ ನಗರ ಎಂಬ ಹೆಸರನ್ನು ಅಧಿಕೃತಗೊಳಿಸುವಂತೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಗೆ ಸಾರ್ವಜನಿಕರು ಈ ಸಂಧರ್ಭದಲ್ಲಿ ಒತ್ತಾಯಿಸಿದ್ದಾರೆ.
ಈ ಸಂಧರ್ಭದಲ್ಲಿ ಹೊಸನಗರ ತಾಲೂಕ್ ಜನಪರ ಹೋರಾಟ ಸಮಿತಿ ಅಧ್ಯಕ್ಷರಾದ ಆರ್ ಎನ್ ಮಂಜುನಾಥ್,ಗ್ರಾಪಂ ಸದಸ್ಯರಾದ ಜಿ ಡಿ ಮಲ್ಲಿಕಾರ್ಜುನ , ಮಾರುತಿ ,ನಟರಾಜ್,ನಾಗರಾಜ್,ಸತೀಶ್ ಹಾಗೂ ಜಯ ಕರ್ನಾಟಕ ಸಂಘಟನೆಯ ವಿನಾಯಕ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಮಲೆನಾಡಿನಾದ್ಯಂತ ಕನ್ನಡದ ಮೇರುನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ರವರ ಹೆಸರನ್ನು ಅನೇಕ ವೃತ್ತ ಹಾಗೂ ಸರ್ಕಲ್ ಗೆ ನಾಮಕರಣ ಮಾಡುವುದರ ಮೂಲಕ ಮಲೆನಾಡಿಗರು ಪುನೀತ್ ರವರಿಗೆ ಗೌರವ ಸೂಚಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್