Headlines

ರಿಪ್ಪನ್ ಪೇಟೆ : ತೆರೆದ ಬಾವಿಗೆ ಕಾಲು ಜಾರಿ ಬಿದ್ದು ಯುವಕ ಸಾವು : ಅಮಾಯಕ ಯುವಕನ ಸಾವಿಗೆ ಮನೆಯ ಮಾಲೀಕನ ನಿರ್ಲಕ್ಷ್ಯವೇ ಕಾರಣವಾಯಿತಾ ?????

ರಿಪ್ಪನ್ ಪೇಟೆ : ಮನೆಯ ಹಿಂಬದಿ ಇರುವ ತೆರೆದ ಬಾವಿಗೆ ಸೋಮವಾರ ರಾತ್ರಿ  ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.
ರಿಪ್ಪನ್ ಪೇಟೆಯ ವಿನಾಯಕ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಆಂಜನೇಯ (ಅಂಜಿ) (25) ಮನೆಯ ಹಿಂಬದಿಯಲ್ಲಿ ತೆರಳುವಾಗ ಈ ಘಟನೆ ನಡೆದಿದೆ.
ನಿನ್ನೆ ರಾತ್ರಿ 10.30 ರ ವೇಳೆ ಮನೆಯ ಕಾಂಪೌಂಡಿನ ಒಳಗಡೆ ಇದ್ದ ತೆರೆದ ಬಾವಿಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಈ ತೆರೆದ ಬಾವಿಗೆ ಬಿದ್ದ ಪರಿಣಾಮ ತಲೆಗೆ ಭೀಕರ ಪೆಟ್ಟಾಗಿದ್ದು ಸ್ಥಳದಲ್ಲೆ ಮೃತ ಪಟ್ಟಿದ್ದಾರೆ.
ಮನೆಯ ಮಾಲೀಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಾಂಪೌಂಡಿನ ಒಳಗಡೆಯ ತೆರೆದ ಬಾವಿ ಇದ್ದರೂ ಅದನ್ನು ಮುಚ್ಚುವ ಗೋಜಿಗೆ ಹೋಗದೆ ಇದ್ದಿದ್ದರಿಂದ ಅಮಾಯಕ ಯುವಕ ಬಲಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

Exit mobile version