ರಿಪ್ಪನ್ ಪೇಟೆ ಬಾಲಕಿಯರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಯರ ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ :

ರಿಪ್ಪನ್ ಪೇಟೆ: ಪಟ್ಟಣದ ಹಳೆ ಸಂತೆ ಮಾರ್ಕೆಟ್ ರಸ್ತೆಯಲ್ಲಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿನಿಯರ ನಿಲಯದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ  ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ ನೀಡಿ ವಿದ್ಯಾರ್ಥಿಗಳ ತೊಂದರೆಗಳನ್ನು  ಕುಂದುಕೊರತೆಗಳನ್ನು ಆಲಿಸಿದರು.
ಮಾಜಿ ಶಾಸಕರು ವಿದ್ಯಾರ್ಥಿನಿಯರ ನಿಲಯಕ್ಕೆ ಭೇಟಿ ನೀಡುತ್ತಿದ್ದಂತೆ ವಿದ್ಯಾರ್ಥಿಗಳು ಹಾಸ್ಟೆಲ್ ವಾರ್ಡನ್ ಹಾಗೂ ಕಳಪೆ  ಆಹಾರದ ಬಗ್ಗೆ ಅಡುಗೆ ತಯಾರಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿಯರ ದೂರಿನ ಆಧಾರದ ಮೇಲೆ ಮಾಜಿ ಶಾಸಕರು ವಾರ್ಡನ್ ಹಾಗೂ ಅಡುಗೆ ತಯಾರಕರ ವಿರುದ್ಧ ಜಿಲ್ಲಾ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಹತ್ತು ದಿನಗಳ ಒಳಗೆ ವಾರ್ಡನ್ ರನ್ನು ಬದಲಾಯಿಸುವಂತೆ ಹಾಗೂ ಅಡುಗೆ ತಯಾರಕರು ವಿದ್ಯಾರ್ಥಿಗಳೊಂದಿಗೆ ಸೌಮ್ಯವಾಗಿ ವರ್ತಿಸಬೇಕು ಹಾಗೂ ಇಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ತಾಕೀತು ಮಾಡಿದರು.
ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಜೊತೆಗೂಡಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಸದಸ್ಯರುಗಳು, ಪೋಷಕರು, ಸಾರ್ವಜನಿಕರು ಹಾಜರಿದ್ದರು.





ವರದಿ : ಎಸ್ ಎಂ ಆರ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago