ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮ ಇದೀಗ ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾಯಿತು.
ಬಲಿಪಾಡ್ಯಮಿಯ ದಿನ ನಿನ್ನೆ ರಾಜಮ್ಮ 70 ವರ್ಷ ವಯೋ ಸಹಜತೆಯಿಂದ ಸಾವಿಗೀಡಾಗಿದ್ದಾರೆ
ಸುಮಾರು ಇಪ್ಪತ್ತು ವರ್ಷದಿಂದ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ರಸ್ತೆ ತಡೆ ಹಾಕಿದ್ದು ನಂತರ ಗ್ರಾಮಸಭೆಯಲ್ಲಿ ತೀರ್ಮಾನವಾದರೂ ರಸ್ತೆ ತೆರವುಗೊಳಿಸಲು ಆದೇಶ ನೀಡಿದ್ದರೂ ಗ್ರಾಮಾಡಳಿತವಾಗಲಿ ಅಥವಾ ತಾಲ್ಲೂಕು ಆಡಳಿತವಾಗಲೀ ಈ ಕೆಲಸಕ್ಕೆ ಮುಂದಾಗಲಿಲ್ಲ.
ಇದರ ಪರಿಣಾಮ ರಾಜಮ್ಮ ಮರಣಹೊಂದಿ 24 ಘಂಟೆ ಯಾದರೂ ಕೂಡ ಶವ ಸಾಗಿಸಲು ರಸ್ತೆ ಇಲ್ಲದೆ ಕುಟುಂಬಸ್ಥರು ಇದೀಗ ಕೈಚೆಲ್ಲಿ ಕೂತಿದ್ದಾರೆ.
ಶವ ಇದೀಗ ದುರ್ವಾಸನೆ ಬೀರುವ ಸ್ಥಿತಿಗೆ ಬಂದಿದ್ದು ಶವ ಸಾಗಿಸಲು ಹೇಗಾದರೂ ರಸ್ತೆಯನ್ನು ಮಾಡಿಕೊಡುವಂತೆ ಇದೀಗ ಕುಟುಂಬಸ್ಥರು ಆಡಳಿತ ವರ್ಗಕ್ಕೆ ಕಣ್ಣೀರಿನೊಂದಿಗೆ ಬೇಡುವಂತಹ ಪರಿಸ್ಥಿತಿಗೆ ಬಂದಿದ್ದಾರೆ.
ಪೋಲಿಸ್ ಸುಭದ್ರತೆಯೊಂದಿಗೆ ಇನ್ನಾದರೂ ತಾಲ್ಲೂಕು ಆಡಳಿತ ಹಾಗೂ ಗ್ರಾಮಾಡಳಿತ ಶವ ಸಾಗಿಸಲು ತತ್ತಕ್ಷಣ ರಸ್ತೆ ಸಂಪರ್ಕ ಮಾಡಿಕೊಡಲಿ ಎಂಬುದೇ ನಮ್ಮ ಆಶಯ.
ವರದಿ: ಪವನ್ ಕುಮಾರ್ ಕಠಾರೆ..
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್