ಶಿವಮೊಗ್ಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣಗೊಂಡಿದ್ದು, ಎಲ್ಲಾ ಆಸ್ಪತ್ರೆಗಳು ಹೌಸ್ಫುಲ್ ಆಗಿವೆ. ರಾಜ್ಯದಲ್ಲೇ ಅತಿ ಹೆಚ್ಚು ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿವೆ.
ಜಿಲ್ಲೆಯ ಹಲವೆಡೆ ಜನರು ಶೀತ, ಜ್ವರ, ವಾಂತಿ, ಮೈ-ಕೈ ನೋವಿನಿಂದ ಬಳಲುತ್ತಿದ್ದಾರೆ. ಒಬ್ಬರಿಂದ ಮನೆ ಮಂದಿಗೆಲ್ಲಾ ರೋಗ ಹರಡುತ್ತಿದ್ದು, ಜನರು ಆತಂಕದಲ್ಲಿದ್ದಾರೆ.
ಶಂಕಿತ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಆರೋಗ್ಯ ಇಲಾಖೆ 3,374 ರಕ್ತದ ಮಾದರಿ ಸಂಗ್ರಹಿಸಿತ್ತು. ಈ ಪೈಕಿ 407 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಶಂಕಿತ ಚಿಕುನ್ ಗುನ್ಯಾ ಪ್ರಕರಣಗಳ ಪತ್ತೆಗೆ 1,927 ಜನರ ರಕ್ತದ ಮಾದರಿ ಸಂಗ್ರಹಿಸಲಾಗಿತ್ತು. ಈ ಪೈಕಿ 239 ಜನರಲ್ಲಿ ಚಿಕುನ್ ಗುನ್ಯಾ ಪತ್ತೆಯಾಗಿದೆ.
ಗ್ರಾಮೀಣ ಹಾಗೂ ನಗರದಲ್ಲಿ ಚರಂಡಿ, ಫಾಗಿಂಗ್, ಜಲಮೂಲಗಳ ಸ್ವಚ್ಚತೆ ಮಾಡದಿರುವುದೇ ಕಾಯಿಲೆಗಳ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್